ಬೆಳಗಾವಿ-೨೫:ಬೆಳಗಾವಿ ತಾಲೂಕಿನ ಕಿಣಯೇ ಗ್ರಾಮದಲ್ಲಿ ಹುಚ್ಚ ಪ್ರೇಮಿ ಪ್ರಕರಣದ ಆರೋಪಿ ತಿಪ್ಪಣ್ಣ ಡೋಕ್ರೆ ಎಂಬಾತನನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್ ಮಾರ್ಬನ್ಯಾಂಗ ತಿಳಿಸಿದ್ದಾರೆ.
ಬೆಳಗಾವಿಯ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ 21 ವರ್ಷದ ಯುವತಿಯೊಂದಿಗೆ ಪ್ರೇಮ ಪ್ರಕರಣಕ್ಕೆ ಯತ್ನಿಸಿದ ಯುವತಿ ದೂರಿನ ಮೇರೆಗೆ ತಿಪ್ಪಣ್ಣ ಡೋಕ್ರೆ (27) ಎಂಬಾತನನ್ನು ಬಂಧಿಸಲಾಗಿದೆ.
ಈ ಸಂಬಂಧ ಬೆಳಗಾವಿ ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದರು.ತಿಪ್ಪಣ್ಣ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.