(ಗುಜರಾತ)ರಾಜ್‌ಕೋಟ್-೨೬: ಶನಿವಾರ (25 ಮೇ 2024), TRP ಆಟದ ವಲಯದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿಯಲ್ಲಿ 30 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 4 ಲಕ್ಷ ರೂಪಾಯಿ ನೆರವು ಘೋಷಿಸಿದೆ.
ರಾಜ್‌ಕೋಟ್‌ನಲ್ಲಿರುವ ಗೇಮ್ ಝೋನ್ ಜನನಿಬಿಡ ಸ್ಥಳವಾದ್ದರಿಂದ ಬೆಂಕಿ ಹೊತ್ತಿಕೊಂಡಾಗ ಜನಜಂಗುಳಿಯಿಂದ ಕೂಡಿತ್ತು. ಇದರಿಂದ ಹಲವರು ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ. ಇದೇ ವೇಳೆ ಈ ಅಪಘಾತ ಪ್ರಕರಣದಲ್ಲಿ ಎಸ್‌ಐಟಿ ನೇಮಿಸಿ ತನಿಖೆ ನಡೆಸಲಾಗುವುದು.
ಈ ಬಗ್ಗೆ ಗುಜರಾತ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚಿಸಲಾಗಿದ್ದು, ಇಡೀ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ. ರಾಷ್ಟ್ರಪತಿ, ಪ್ರಧಾನಿ, ಗೃಹ ಸಚಿವರು ಸೇರಿದಂತೆ ಹಲವು ನಾಯಕರು ಈ ಘಟನೆಗೆ ಸಂತಾಪ ಸೂಚಿಸಿದ್ದಾರೆ.