ನವದೆಹಲಿ-೨೬: ಪೂರ್ವ ದೆಹಲಿಯ ವಿವೇಕ್ ವಿಹಾರ್‌ನಲ್ಲಿರುವ ಶಿಶುಪಾಲನಾ ಕೇಂದ್ರದಲ್ಲಿ (ಶನಿವಾರ) ರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ. ತಡರಾತ್ರಿ 12 ಮಕ್ಕಳನ್ನು ರಕ್ಷಿಸಲಾಗಿದ್ದು, ಈ ಪೈಕಿ 6 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಪ್ರಸ್ತುತ 6 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಂದು ಮಗು ವೆಂಟಿಲೇಟರ್‌ನಲ್ಲಿದೆ.
ರಾತ್ರಿ 11.32ಕ್ಕೆ ಐಐಟಿ, ಬ್ಲಾಕ್ ಬಿ, ವಿವೇಕ್ ವಿಹಾರ್ ಪ್ರದೇಶದ ಬೇಬಿ ಕೇರ್ ಸೆಂಟರ್ ಗೆ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ನೀಡಲಾಯಿತು ಎಂದು ದೆಹಲಿ ಅಗ್ನಿಶಾಮಕ ದಳ ತಿಳಿಸಿದೆ. 9 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ.
ಕಟ್ಟಡದಿಂದ 12 ನವಜಾತ ಶಿಶುಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.