ಬೆಳಗಾವಿ-೨೯ : ಬೆಳಗಾವಿ ಮಹಾನಗರ ಪಾಲಿಕೆಯ ಜನನ ಮತ್ತು ಮರಣ ಮಂಗಳವಾರ ಲೋಕಾಯುಕ್ತ ಇಲಾಖೆ ದಾಳಿ ನಡೆಸಿದ್ದು, ಲೋಕಾಯುಕ್ತ ಇಲಾಖೆ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಜನನ ಮತ್ತು ಮರಣ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಮಹಾನಗರ ಪಾಲಿಕೆಯ ಜನನ ಮತ್ತು ಮರಣ ವಿಭಾಗವು ಸರ್ಕಾರಿ ಶುಲ್ಕಕ್ಕಿಂತ ಹೆಚ್ಚಿನ ಮೊತ್ತವನ್ನು ವಿಧಿಸುತ್ತದೆ. ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದರು ನಾಗರಿಕರು. ಆದರೆ ತಾಂತ್ರಿಕ ತೊಂದರೆಯಿಂದ ಜನರು ಗಂಟೆಗಟ್ಟಲೆ ನಿಲ್ಲಬೇಕಾಗಿದೆ. ಅದೇ ರೀತಿ ಪ್ರಮಾಣ ಪತ್ರ ನೀಡಲು 10 ರೂಪಾಯಿ ಬದಲು 30 ರೂಪಾಯಿ ಪಡೆದು ವಂಚಿಸುತ್ತಿದ್ದಾರೆ. ಅಲ್ಲದೇ ಲೋಕೋಪಯೋಗಿ ಹಾಗೂ ಇತರೆ ಕಾಮಗಾರಿಗಳಲ್ಲಿ ವಿಳಂಬ ಆಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿ ಮಹಾನಗರ ಪಾಲಿಕೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.