ಬೆಳಗಾವಿ-೦೧: ಬಿಜೆಪಿ ಶಾಸಕ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ ಶಾಸಕ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ವಾಗ್ದಾಳಿ ನಡೆಸಿದರು.
ನಗರದಲ್ಲಿ ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಬಿಜೆಪಿ ಶಾಸಕ ಅವರು ತಾವು ಮಾಡಿರುವ ಭ್ರಷ್ಟಾಚಾರದ ಬಗ್ಗೆ ಏಕೆ ಮಾತನಾಡುತ್ತಿಲ್ಲ. ಶಾಸಕ ಮಾಡಿರುವ ಭ್ರಷ್ಟಾಚಾರದ ಪ್ರಕರಣ ಈಗ ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.
ಬೆಳಗಾವಿ ನಗರದಲ್ಲಿ ಪೊಲೀಸರ ಮೂಲಕ ದಬ್ಬಾಳಿಕೆ ಮಾಡಿ ಮುಗ್ದ ಜನರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಜನರಿಗೆ ಅನ್ಯಾಯ ಮಾಡಿರುವುದನ್ನು ಜನ ಮರೆತಿಲ್ಲ. ಎರಡೂ ಭ್ರಷ್ಟಾಚಾರ ಪ್ರಕರಣವನ್ನು ಶಾಸಕ ಎದುರಿಸುತ್ತಿದ್ದಾರೆ. ಖಾದರವಾಡಿಯಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಇಲ್ಲಿನ ಜನರ ಮೇಲೆ ಪೊಲೀಸರ ಮೂಲಕ ದಬ್ಬಾಳಿಕೆ ಮಾಡಿ ಭ್ರಷ್ಟಾಚಾರ ಮಾಡಿರುವುದು ಬಹಿರಂಗವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ಹೇಳಿದರು.