23/12/2024
ನಾವು ಪರಿಸರವನ್ನು ರಕ್ಷಿಸಿದರೆ ಪರಿಸರವು ನಮ್ಮನ್ನು ರಕ್ಷಿಸುತ್ತದೆ

ಬೆಳಗಾವಿ-೦೫: ನಮ್ಮಲ್ಲಿ ಪರಿಸರದ ಪ್ರಜ್ಞೆ ಕಡಿಮೆ ಇದೆ. ಈಗ ಪರಿಸರ ಕುರಿತು ತಿಳಿ ಹೇಳುವ ಅವಶ್ಯಕತೆ ಇದೆ. ಜಾಗತಿಕ ತಾಪಮಾನ ಹೆಚ್ಚಾಗುತ್ತಿರುವದರಿಂದ ಪರಿಸರದ ಬಗ್ಗೆ ಕಾಳಜಿ ಅಗತ್ಯವಾಗಿದೆ. ನಮ್ಮಲ್ಲಿ ಪರಿಸರದ ಬಗ್ಗೆ ಕಾಳಜಿ ಕಡಿಮೆಯಾಗಿದೆ. ಎಲ್ಲರೂ ಹಣದ ಬಗ್ಗೆ ಕಾಳಜಿ ಮಾಡುತ್ತಾ ಇದ್ದಾರೆ. ನಾವು ಪರಿಸರವನ್ನು ರಕ್ಷಿಸಿದರೆ ಪರಿಸರವು ನಮ್ಮನ್ನು ರಕ್ಷಿಸುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಲ್ ವಿಜಯಲಕ್ಷ್ಮಿ ದೇವಿ ಅವರು ಹೇಳಿದರು.

ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಬುಧವಾರ  ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಅರಣ್ಯ ಸಹಾಯಕ ಸಂರಕ್ಷಾಧಿಕಾರಿಗಳಾದ ಶಿವರುದ್ರಪ್ಪ ಕಬಾಡಗಿ ಅವರು ಮಾತನಾಡಿ, ಎಲ್ಲರೂ ಸಸಿಗಳನ್ನು ನೆಟ್ಟು ಅವುಗಳನ್ನು ರಕ್ಷಣೆ ಮಾಡುವುದರ ಮೂಲಕ ನಾವೇಲ್ಲರು ಪರಿಸರಕ್ಕೆ ಕೊಡುಗೆ ನೀಡಬೇಕಾಗಿದೆ. ಪರಿಸರ ರಕ್ಷಣೆ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಪಿ. ಮುರಳಿ ಮೋಹನ್ ರೆಡ್ಡಿ ಅವರು ಸ್ವಾಗತಿಸಿ, ನಿರೂಪಣೆ ಮಾಡಿದರು. ಬೆಳಗಾವಿ ತಾಲೂಕಿನ ಎಲ್ಲ ಮಾನ್ಯ ನ್ಯಾಯಾಧೀಶರು, ಸಿಬ್ಬಂದಿಗಳು, ವಕೀಲ ಸಂಘದ ಅಧ್ಯಕ್ಷರಾದ ಎಸ್. ಎಸ್. ಕಿವಡಸಣ್ಣವರ, ಅರಣ್ಯ ಇಲಾಖೆಯ ಸಿಬ್ಬಂಧಿಯವರು ಭಾಗವಹಿಸಿದ್ದರು.

error: Content is protected !!