ನವದೆಹಲಿ-೦೭:ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸಂಜೆ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಂಜೆ 7.15ಕ್ಕೆ ರಾಷ್ಟ್ರಪತಿಗಳು ನರೇಂದ್ರ ಮೋದಿ ಮತ್ತು ಅವರ ನೂತನ ಸಚಿವ ಸಂಪುಟಕ್ಕೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಇದಕ್ಕೂ ಮುನ್ನ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದ ಎನ್‌ಡಿಎ ನಿಯೋಗವೂ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಪತ್ರವನ್ನು ಸಲ್ಲಿಸಿತ್ತು. ಎನ್‌ಡಿಎ ಘಟಕದ ಪಕ್ಷಗಳ ಬೆಂಬಲ ಪತ್ರವನ್ನೂ ರಾಷ್ಟ್ರಪತಿಗಳಿಗೆ ಹಸ್ತಾಂತರಿಸಲಾಯಿತು.