ಬೆಂಗಳೂರು-೦೯: ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ಸಿಎಂ ಸಿದ್ದರಾಮಯ್ಯನವರನ್ನು ಬೆಂಗಳೂರಿನ ಕಾವೇರಿ ಗೃಹ ಕಚೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಆಶೀರ್ವಾದ ಪಡೆದರು.
ಇದೇ ಸಿಎಂ ಸಿದ್ದರಾಮಯ್ಯನವರು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಂಕಾ ಜಾರಕಿಹೊಳಿ ಅವರಿಗೆ ರಾಜಕೀಯ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಾಸಕರಾದ ಅಶೋಕ್ ಪಟ್ಟಣ, ಬಾಬಾಸಾಹೇಬ್ ಪಾಟೀಲ್, ಆಸೀಫ್ (ರಾಜು) ಸೇಠ್, ವಿಶ್ವಾಸ ವೈದ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ, ಬೆಳಗಾವಿ ಬೂಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮಾಜಿ ಸಚಿವರಾದ ವೀರಕುಮಾರ ಪಾಟೀಲ, ಮಾಜಿ ಶಾಸಕರಾದ ಕಾಕಾಸಾಹೇಬ ಪಾಟೀಲ, ಎಸ್.ಬಿ. ಘಾಟಗೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಮುಖಂಡರಾದ ಗಜಾನನ ಮಂಗಸೂಳಿ, ಯುವ ನಾಯಕ ರಾಹುಲ್ ಜಾರಕಿಹೊಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.