ಬೆಂಗಳೂರು-೧೧: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಬಂಧಿಸಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕಾಗಿ ರೇಣುಕಾ ಸ್ವಾಮಿಯನ್ನು ಹತ್ಯೆ ಮಾಡಲಾಗಿತ್ತು. ನಟ ದರ್ಶನ್ ಅವರ ಕೈವಾಡದ ಮೇರೆಗೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸಂಚಲನ ಮೂಡಿಸಿದೆ. ನಟ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಲಾಗಿದೆ.