ನವದೆಹಲಿ-೧೨:ಬಿಜೆಪಿಯ ಹಿರಿಯ ನಾಯಕ ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಸಂಜೆ ಭುವನೇಶ್ವರದ ಜನತಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ಜುಯಲ್ ಓರಂ ಮತ್ತು ಅಶ್ವಿನಿ ವೈಷ್ಣವ್. ಮತ್ತು ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.