ಬೆಳಗಾವಿ-೧೪: ಬೆಳಗಾವಿ-ಕಿತ್ತೂರ-ಧಾರವಾಡ ರೈಲು ಮಾರ್ಗ ಈ ಭಾಗದ ಜನರ ಬಹು ದಿನಗಳ ಬೇಡಿಕೆ ಹಾಗೂ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಕಾಮಗಾರಿಗೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧಿನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ಕಾಮಗಾರಿಯನ್ನು ಚುರುಕುಗೊಳಿಸಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಸೂಚನೆ ನೀಡಿದರು.
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಂದು ಜರುಗಿದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.೯೦೦ ಕೋಟಿ ರೂಪಾಯಿ ವೆಚ್ಚದ ಬೆಳಗಾವಿ-ಕಿತ್ತೂರು-ಧಾರವಾಡ. ರೈಲುಮಾರ್ಗ ನಿರ್ಮಾಣ ಬಹುದಿನಗಳ ಕನಸು. ಆದ್ದರಿಂದ ಆದ್ಯತೆ ಮೇರೆಗೆ ಇದನ್ನು ಪೂರ್ಣಗೊಳಿಸಬೇಕು. ಕಾಮಗಾರಿಗೆ ಒಟ್ಟು ಅಗತ್ಯವಿರುವ ೬೦೦ ಎಕರೆ ಪೈಕಿ ಧಾರವಾಡದಿಂದ ಬಾಗೇವಾಡಿವರೆಗಿನ ೩೨೨ ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಬೆಳಗಾವಿ ಸಮೀಪದ ಕುರುವಿನಕೊಪ್ಪ ಸೇರಿದಂತೆ ಕೆಲ ಗ್ರಾಮಗಳ ವ್ಯಾಪ್ತಿಯಲ್ಲಿನ ೧೫೫ ಎಕರೆ ಭೂಸ್ವಾಧೀನ ಕೆಲಸ ಬಾಕಿಯಿದೆ ಎಂದು ಕೆ.ಆಯ್.ಡಿ.ಬಿ. ವ್ಯವಸ್ಥಾಪಕರು ಮಾಹಿತಿ ನೀಡಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಂಸದರಾದ ಜಗದೀಶ ಶೆಟ್ಟರ ಅವರು, ೭೩ ಕಿ.ಮೀ. ಉದ್ದದ ಧಾರವಾಡ-ಬೆಳಗಾವಿ ರೈಲು ಮಾರ್ಗಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿರುವುದರಿಂದ ಮಾರ್ಗ ಬದಲಾವಣೆ ಕುರಿತು ಚರ್ಚಿಸದೇ ಅಗತ್ಯ ಭೂಸ್ವಾಧೀನಕ್ಕೆ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ರೈತರ ಸಭೆ ಕರೆದು ತುರ್ತಾಗಿ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದ ಅವರು ರೈಲುಮಾರ್ಗ(ಅಲೈನ್ ಮೆಂಟ್) ಬದಲಾವಣೆ ಕುರಿತು ನ್ಯಾಯಾಲಯದ ಆದೇಶದಲ್ಲಿ ಇಲ್ಲ; ಆದ್ದರಿಂದ ಅಗತ್ಯವಿರುವ ಭೂಸ್ವಾಧೀನದ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು.ಭೂಸ್ವಾಧೀನಕ್ಕೆ ಅಗತ್ಯವಿರುವ ಭೂಸ್ವಾಧೀನಕ್ಕೆ ಪೊಲೀಸ್ ಭದ್ರತೆ ಸೇರಿದಂತೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.