23/12/2024
IMG_20240620_092703

ಬೆಂಗಳೂರು-೨೦: ಏಪ್ರಿಲ್ 2019 ರ ಮೊದಲು ನೋಂದಣಿಯಾದ ವಾಹನಗಳಿಗೆ ಹೈ-ಸೆಕ್ಯುರಿಟಿ ನೋಂದಣಿ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸಲು ರಾಜ್ಯ ಸರ್ಕಾರ ಸೆಪ್ಟೆಂಬರ್ 15 ರವರೆಗೆ ಗಡುವನ್ನು ವಿಸ್ತರಿಸಿದೆ. ಹಲವಾರು ಗಡುವುಗಳ ಹೊರತಾಗಿಯೂ, ಹೆಚ್ಚಿನ ವಾಹನ ಮಾಲೀಕರು ಇನ್ನೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಅಳವಡಿಸಿಲ್ಲ. ಈ ಮೊದಲು ಜೂನ್ 12ಕ್ಕೆ ಕೊನೆಗೊಂಡ ನಂತರ ಜುಲೈ 4ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಮಹತ್ವದ ಸಭೆ ನಡೆದಿದ್ದು, ಸೆ.15ರವರೆಗೆ ಗಡುವು ವಿಸ್ತರಿಸಲಾಗಿದೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸಲು ಸೆ.15ರವರೆಗೆ ಅನುಮತಿ ನೀಡಲಾಗಿದೆ. ಆದರೆ, ಸೆ.16ರಿಂದ ದುಬಾರಿ ದಂಡ ವಸೂಲಿ ಮಾಡಲಾಗುತ್ತಿದೆ ಎಂದರು.

ನಾವು ಈಗಾಗಲೇ ಹಲವು ಬಾರಿ ಗಡುವನ್ನು ವಿಸ್ತರಿಸಿದ್ದೇವೆ. ಆದರೆ, ಇನ್ನೂ ಹಲವು ವಾಹನಗಳಿಗೆ ನಂಬರ್ ಪ್ಲೇಟ್ ಇಲ್ಲ. ಇದೀಗ ಹೆಚ್ಚಿನ ಸಂಖ್ಯೆಯ ವಾಹನಗಳಿಗೆ ನಂಬರ್ ಪ್ಲೇಟ್ ಬಾಕಿ ಇರುವ ಕಾರಣ ಗಡುವು ವಿಸ್ತರಿಸಲಾಗುತ್ತಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು. ರಾಜ್ಯದಲ್ಲಿ ದ್ವಿಚಕ್ರ ವಾಹನಗಳು, ಆಟೋಗಳು ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ಎಲ್ಲಾ ವಾಹನಗಳು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಹೊಂದಿರುವುದು ಕಡ್ಡಾಯವಾಗಿದೆ. ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿದೆ. ರಾಜ್ಯ ಸರ್ಕಾರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಕಡ್ಡಾಯವಾಗಿ ಅಳವಡಿಸಲು ಆದೇಶಿಸಿದೆ.

error: Content is protected !!