ಬೆಳಗಾವಿ-೨೦:ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದ ಜಿಲ್ಲಾಧಿಕಾರಿ ಆವರಣದಲ್ಲಿ ಪ್ರತಿಭಟಿಸಿ, ಜಿಲ್ಲಾಡಳಿತ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ರೈತ ಮುಖಂಡ ಪ್ರಕಾಶ ನಾಯಿಕ ಮಾತನಾಡಿ,
ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಬೇಕಿದ್ದ ಕಾರ್ಖಾನೆಗಳು ಅನ್ಯಾಯ ಮಾಡುತ್ತಿವೆ. ಬಾಕಿ ಬಿಲ್ ಗೆ ಸರಕಾರ ಕಾನೂನಾತ್ಮಕವಾಗಿ ಕಾರ್ಖಾನೆಗಳಿಗೆ ನೋಟಿಸ್ ನೀಡಿವೆ. ಆದರೂ, ಹಣ ಮಾತ್ರ ಜಮೆ ಆಗಿಲ್ಲ. ಸರಕಾರ ಜನರ ಕಿವಿಗೆ ಹೂ ಇಟ್ಟು, ಕೈ ಚಿಪ್ಪು ಕೊಡುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಅಧ್ಯಕ್ಷ ಚೂನಪ್ಪ ಪೂಜಾರಿ, ಮುಖಂಡರಾದ ಚಾಮರಸ ಮಾಲಿಪಾಟೀಲ ಪಿ.ಎಸ್.ಬೋಗುರ ಸೇರಿ ಮತ್ತಿತರರು ಉಪಸ್ಥಿತಿರಿದ್ದರು.