ಬೆಳಗಾವಿ-೨೦ :ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲಗಳ ಅಧಿವೇಶನ ಸಂದರ್ಭದಲ್ಲಿ ಕರ್ನಾಟಕ ನಾಮಕರಣಗೊಂಡು ಐವತ್ತು ವರ್ಷ ತುಂಬುತ್ತಿರುವ ಶುಭ ಸಂದರ್ಭದಲ್ಲಿ ವಿಧಾನಸೌಧದ ಮುಂದೆ ನಾಡ ದೇವತೆ ಭುವನೇಶ್ವರಿ ಪ್ರತಿಮೆ ಸ್ಥಾಪಿಸಲು ಒತ್ತಾಯಿಸಿ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಅರ್ಪಿಸಲಾಗಿತ್ತು.
ಮನವಿಗೆ ಸ್ಪಂದಿಸಿದ ಸರ್ಕಾರ ಇಂದು ದಿನಾಂಕ 20 ಜೂನ್ 2024 ರಂದು ಬೆಂಗಳೂರು ವಿಧಾನಸೌಧದ ಆವರಣದಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ 25 ಅಡಿಯ ನಾಡ ದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸುತ್ತಿದೆ. ಬರುವ ನವಂಬರ್ 1ರೂಳಗೆ ಕಂಚಿನ ಪ್ರತಿಮೆ ನಿರ್ಮಾಣ ಪೂರ್ಣಗೊಳ್ಳುವ ಗುರಿ ಹೊಂದಲಾಗಿದೆ.
ನಮ್ಮ ಮನವಿಗೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಮಸ್ತ ಕನ್ನಡಿಗರ ಪರವಾಗಿ ಧನ್ಯವಾದಗಳು.
ಶ್ರೀನಿವಾಸ ತಾಳೂಕರ
ಕನ್ನಡಪರ ಹೋರಾಟಗಾರರು ಬೆಳಗಾವಿ
9880665525/8073165485.