ಬೆಳಗಾವಿ-೨೨:ಅಂಗವಿಕಲ ಕ್ರೀಡಾಪಟುಗಳಿಗಾಗಿ ಏಳು ಸದಸ್ಯರ ತಂಡವನ್ನು ಕೊಲಂಬಸ್‌ನಲ್ಲಿ ಆಯ್ಕೆ ಮಾಡಲಾಗಿದೆ. ವಿಕಲಚೇತನ ಕ್ರೀಡಾ ಪಟುಗಳಿಗೆ ಸರಕಾರದಿಂದ ಯಾವುದೇ ರೀತಿಯ ಬೆಂಬಲ ಸಿಗುತ್ತಿಲ್ಲ, ಕ್ರೀಡಾಕೂಟಕ್ಕೆ ಹೋಗುವುದು ಕಷ್ಟವಾಗಿದೆ ಎಂದು ಹೇಳಿದ್ದು, ಸರಕಾರ ವಿಕಲಚೇತನ ಕ್ರೀಡಾಪಟುಗಳಿಗೆ ಸಹಾಯ ಮಾಡಲಿ ಎಂದು ಕ್ರೀಡಾ ಪಟುಗಳು ಪತ್ರಿಕಾಗೋಷ್ಠಿಯಲ್ಲಿ ವ್ಯಕ್ತಪಡಿಸಿದರು .
ಇಂತಹ ಕ್ರೀಡಾ ಪಟುಗಳಿಗೆ ಉದ್ಯೋಗ ಕಲ್ಪಿಸಲು ಸರಕಾರವೂ ಅನುಕೂಲ ಮಾಡಿಕೊಡಬೇಕು ಎಂದು ಶನಿವಾರ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕ್ರೀಡಾ ಪಟುಗಳು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದರು.