ಬೆಳಗಾವಿ-೨೪: ಬೆಳಗಾವಿ ಮಹಾನಗರ ಪಾಲಿಕೆಯ 22ನೇ ಅವಧಿಯ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು ಚುನಾಯಿಸಲು ಜುಲೈ 02 ರಂದು ಚುನಾವಣೆ ನಡೆಸಲಾಗುವುದು ಎಂದು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಚುನಾವಣೆಯ ಅಧ್ಯಕ್ಷಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರಾದ ಎಸ್. ಬಿ. ಶೆಟ್ಟೆಣ್ಣವರ ತಿಳಿಸಿದ್ದಾರೆ.
ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಜುಲೈ 2 ರಂದು ಬೆಳಗ್ಗೆ 10 ರಿಂದ 12 ಘಂಟೆ ವರೆಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಾಪಪತ್ರಗಳ ಸ್ವೀಕೃತಿ ನಡೆಯಲಿದೆ.
ಮಧ್ಯಾಹ್ನ 3 ಘಂಟೆಗೆ ಚುನಾವಣೆಯ ಪ್ರಕ್ರಿಯೆ ಸಭೆ ನಡೆಯಲಿದೆ ಎಂದು ಬೆಳಗಾವಿ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಚುನಾವಣೆಯ ಅಧ್ಯಕ್ಷಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರಾದ ಎಸ್. ಬಿ. ಶೆಟ್ಟೆಣ್ಣವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.