ಬೆಳಗಾವಿ-೨೫: ಸಂವಿಧಾನದ ದೇಶದಲ್ಲಿ ವಿರುದ್ಧವಾಗಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ನಿರ್ಮಾಣ ಮಾಡಿ ದೇಶದ ಜನರ ಕಗ್ಗೊಲೆ ಮಾಡಿದರು. ಪ್ರತಿ ವರ್ಷ ಬಿಜೆಪಿ ಇದನ್ನು ಕರಾಳ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಬಿತ್ತಿ ಪತ್ರ ಹಂಚಲು ಮುಂದಾಗಿದ್ದ ನೂರಾರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಭಾರತೀಯರ ಸಂವಿಧಾನಕ್ಕೆ ವಿರುದ್ಧವಾಗಿ ಎಮರ್ಜೆನ್ಸಿ, ತುರ್ತು ಪರಿಸ್ಥಿತಿ ಜಾರಿ ಮಾಡಿದನ್ನು ಕರಾಳ ದಿನವನ್ನಾಗಿ ವಿರೋಧಿಸಿ ಸೋಮವಾರ ಬಿಜೆಪಿ ಜಿಲ್ಲಾ ಕಾರ್ಯಕರ್ತರು ಇಲ್ಲಿನ ಪ್ರವಾಸಿ ಮಂದಿರದಿಂದ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಕಚೇರಿಗೆ ಬಿತ್ತಿ ಪತ್ರ ಹಂಚಲು ಮುಂದಾದಾಗ ಪೊಲೀಸರು ಅವರನ್ನು ತಡೆದು ಬಂಧಿಸಿದರು.