23/12/2024
IMG-20240625-WA0068

ಬೆಳಗಾವಿ-೨೫: ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು ಹಾಗೂ ದಕ್ಷಿಣ ಭಾರತ ಜೈನ ಸಭೆಯ ಅಧ್ಯಕ್ಷರಾಗಿದ್ದ ರಾವಸಾಹೇಬ್ ಪಾಟೀಲ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಅವರು ಹೇಳಿಕೆ ನೀಡಿ, ರಾವ್ ಸಾಹೇಬ ಪಾಟೀಲ ಅವದ ಸುದ್ಧಿ ಕೇಳಿ ಮನಸ್ಸಿಗೆ ನೋವಾಯಿತು. ಸಮಾಜಮುಖಿ ಹಾಗೂ ಸಹಕಾರ ರಂಗದಲ್ಲಿ ಅವರ ಸೇವೆ ಅಪಾರ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸಹ ರಾವಸಾಹೇಬ ಪಾಟೀಲ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

error: Content is protected !!