23/12/2024
IMG-20240626-WA0002

ಬೆಳಗಾವಿ-೨೬: ಇಂದಿರಾ ಗಾಂಧಿ ಸಂವಿಧಾನದ ಹತ್ಯೆ ಮಾಡಿದ ಕರಾಳ ದಿನವನ್ನು ನಾವು ಮರೆಯಲು ಸಾಧ್ಯವಿಲ್ಲ. ಇದಕ್ಕಾಗಿ ಕಾಂಗ್ರೆಸ್‌ನವರು ದೇಶದ ಜನರ ಕ್ಷಮೆಯಾಚಿಸಬೇಕು,ಆದರೆ ತುರ್ತು ಪರಿಸ್ಥಿತಿ ಘೋಷಿಸಿದ್ದನ್ನು ಮತ್ತು ಜನರಿಗೆ ಮಾಡಿದ ಅನ್ಯಾಯವನ್ನು ಕಾಂಗ್ರೆಸ್‌ನವರು ಮರೆಯಬಹುದು ಎಂದು ಒತ್ತಾಯಿಸಿದರು.

ಮಂಗಳವಾರ ನಗರದ ಹಮ್ಮಿಕೊಂಡಿದ್ದ ‘ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು ಮತ್ತು ತುರ್ತು ಪರಿಸ್ಥಿತಿಯಲ್ಲಿ ಸಂವಿಧಾನಕ್ಕೆ ಮಾಡಿದ ಅಪಚಾರ’ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತುರ್ತು ಪರಿಸ್ಥಿತಿ ಘೋಷಣೆ ಮೂಲಕ ಸಂವಿಧಾನದ ನಿಬಂಧನೆಗಳಡಿ ಜನರ ಅಧಿಕಾರವನ್ನು ಕಾಂಗ್ರೆಸ್ ಹತ್ತಿಕ್ಕಿತು. ಬ್ರಿಟಿಷರ ಆಳ್ವಿಕೆಯಲ್ಲೂ ಇಂಥ ಬೆಳವಣಿಗೆಗಳಿಗೆ ನಾವು ಸಾಕ್ಷಿಯಾಗಿರಲಿಲ್ಲ ಎಂದರು.

ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ತುರ್ತು ಪರಿಸ್ಥಿತಿಯನ್ನು ಜನರು ಮರೆಯಬೇಕು ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ತುರ್ತು ಪರಿಸ್ಥಿತಿಯಲ್ಲಿ ಜನರು ಸಾಕಷ್ಟು ನೋವು ಅನುಭವಿಸಿದ್ದಾರೆ. ಸಂತ್ರಸ್ತರು ಮತ್ತು ಅವರ ಕುಟುಂಬ ಸದಸ್ಯರ ಮೇಲೆ ನಡೆದ ದೌರ್ಜನ್ಯವನ್ನು ಮರೆಯಲಾಗದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಾಗುತ್ತದೆ ಎಂದು ಕಾಂಗ್ರೆಸ್‌ನವರು ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ನಡೆಸಿತ್ತು. ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂದು ಖರ್ಗೆ ಆರೋಪಿಸಿದ್ದರು. ಆದರೆ, ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲದಿದ್ದರೆ ಕಾಂಗ್ರೆಸ್ ಮತ್ತು ಇತರೆ ವಿರೋಧ ಪಕ್ಷದವರು ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಇರುತ್ತಿರಲಿಲ್ಲ ಎಂದು ಹೇಳಿದರು.

ಖರ್ಗೆ ಅವರು ಗಾಂಧಿ ಕುಟುಂಬಕ್ಕೆ ನಿಷ್ಠೆ ತೋರುತ್ತ, ತಮ್ಮ ಇಡೀ ಜೀವನವನ್ನು ಕಳೆದಿದ್ದಾರೆ. ಹಾಗಾಗಿ ತುರ್ತು ಪರಿಸ್ಥಿತಿ ಅವರ ದೃಷ್ಟಿಯಲ್ಲಿ ಪ್ರಜಾಪ್ರಭುತ್ವವಾಗಬಹುದು ಎಂದರು.

ವಿಧಾನ ಪರಿಷತ್‌ ಸದಸ್ಯ ಚಲವಾದಿ ನಾರಾಯಣಸ್ವಾಮಿ, ಇಂದು ಕಾಂಗ್ರೆಸ್ ತನ್ನನ್ನು ಸಂವಿಧಾನದ ರಕ್ಷಕ ಎಂಬಂತೆ ಬಿಂಬಿಸಿಕೊಳ್ಳುತ್ತಿದೆ. ನರೇಂದ್ರ ಮೋದಿ ಸಂವಿಧಾನ ಬದಲಿಸುತ್ತಾರೆ ಎನ್ನುತ್ತಿದೆ. ಆದರೆ, ಸ್ವತಃ ಅಂಬೇಡ್ಕರ್ ಅವರೇ ಮರಳಿ ಬಂದರೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ. ಆದರೆ, ಈ ವಿಚಾರದಲ್ಲಿ ಕಾಂಗ್ರೆಸ್ ನಾಟಕವಾಡುತ್ತಿದೆ. ತುರ್ತು ಪರಿಸ್ಥಿತಿ ಘೋಷಣೆ ಕುರಿತು ಇಂದು ಆತ್ಮಾವಲೋಕನದ ಅಗತ್ಯವಿದೆ’ ಎಂದರು.

ಸಂವಿಧಾನಕ್ಕೆ ದ್ರೋಹ ಬಗೆದ ಕಾಂಗ್ರೆಸ್, ಪ್ರಜಾಪ್ರಭುತ್ವವನ್ನು ನಾಶಪಡಿಸಿದೆ. ಇಂದು ಅಂಬೇಡ್ಕರ್ ಬದುಕಿದ್ದರೆ ಸಂವಿಧಾನ ಉಲ್ಲಂಘಿಸಿದ್ದಕ್ಕೆ ಇಂದಿರಾ ಗಾಂಧಿ ಅವರಿಗೆ ಪ್ರತ್ಯುತ್ತರ ನೀಡುತ್ತಿದ್ದರು. ಹಾಗಾಗಿ ಕಾಂಗ್ರೆಸ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ 2006 ರಲ್ಲಿ ಕಾಂಗ್ರೆಸ್ ಸೇರಿದರು ಅದಕ್ಕೂ ಮುನ್ನ, ತುರ್ತು ಪರಿಸ್ಥಿತಿ ಘೋಷಣೆ ವಿಚಾರವಾಗಿ ಇಂದಿರಾ ಗಾಂಧಿ ವಿರುದ್ಧ ಹೇಳಿಕೆ ನೀಡುತ್ತಿದ್ದರು. ಆದರೆ ಈಗ ಮೌನ ವಹಿಸಿದ್ದಾರೆ. ತುರ್ತು ಪರಿಸ್ಥಿತಿ ಘೋಷಣೆಗೆ ರಾಹುಲ್ ಗಾಂಧಿ ಕಾರಣ ನೀಡಬೇಕು. ಸಾಧ್ಯವಾಗದಿದ್ದರೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರು ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಘೋಷಿಸಲು ಕಾರಣವಾದ ಘಟನೆಗಳು, ಜನರು ಅನುಭವಿಸಿದ ಯಾತನೆ, ಮಾಧ್ಯಮಗಳ ನಿಯಂತ್ರಣ, ಸಂವಿಧಾನಕ್ಕೆ ಮಾಡಿದ ತಿದ್ದುಪಡಿಗಳು ಮತ್ತಿತರ ವಿಷಯಗಳ ಕುರಿತು ಉಪನ್ಯಾಸ ನೀಡಿದರು.

 

error: Content is protected !!