ಖಾನಾಪೂರ-೦೨: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಂಗಳವಾರ ಖಾನಾಪುರ ತಾಲೂಕಿನ ಪಾರಿಶ್ವಾಡ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನೆ ನಡೆಸಿದರು.
ಗ್ರಾಮದ ಅಭಿವೃದ್ಧಿ ಕೆಲಸಗಳ ಮಾಹಿತಿ ಪಡೆದ ಚನ್ನರಾಜ ಹಟ್ಟಿಹೊಳಿ, ನಂತರ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ದೀರ್ಘ ಕಾಲದಿಂದ ಬಾಕಿ ಇರುವ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ, ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ ಮೇಲೆ ಸ್ಪದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ತಹಶಿಲ್ದಾರ, ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಪಾಲ್ಗೊಂಡಿದ್ದರು.