ಪರಿಷ್ಕೃತ ಪಠ್ಯದ ವಿಷಯವಾಗಿ ಸರ್ಕಾರ ತೆಗೆದುಕೊಂಡ ನಿರ್ಧಾರ ಹಾಗೂ ವೀರಶೈವ ಪದ ಪಠ್ಯದಿಂದ ಕೈಬಿಟ್ಟಿರುವುದನ್ನು ಜಾಗತಿಕ ಲಿಂಗಾಯತ ಮಹಾಸಭೆ ಸ್ವಾಗತಿಸುತ್ತದೆ 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ “ವಿಶ್ವಗುರು ಬಸವಣ್ಣನವರು ಸಾಂಸ್ಕೃತಿಕ ನಾಯಕ” ಎಂಬ ಶೀರ್ಷಿಕೆ ಅಡಿಯಲ್ಲಿ ಅಳವಡಿಸಲಾದ ವಿಷಯ ಅತ್ಯಂತ ಸೂಕ್ತವಾಗಿದ್ದು, ವಾಸ್ತವ ಸಂಗತಿಗಳಿಂದ ಕೂಡಿದೆ. ಎಂದು ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ ಮುಖ್ಯ ಮಂತ್ರಿಗಳಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ವೀರಶೈವ ಶಿವಾಚಾರ್ಯ ಸಂಸ್ಥೆ ಹಾಗೂ ಕೆಲ ರಾಜಕಾರಣಿಗಳು ವೀರಶೈವ ಪದ ಕೈಬಿಟ್ಟಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವುದನ್ನು ಅವರು ಖಂಡಿಸಿದ್ದಾರೆ. ಇಂತಹ ವಿರೋಧಗಳಿಗೆ ಸರ್ಕಾರ ಆಸ್ಪದ ಕೊಡಬಾರದು ಸರ್ಕಾರದ ಈ ನಿರ್ದಾರಕ್ಕೆ ಜಾಗತಿಕ ಲಿಂಗಾಯತ ಮಹಾಸಭೆ ಸಂಪೂರ್ಣ ಬೆಂಬಲ ನೀಡುತ್ತದೆ ಒಂದು ವೇಳೆ ಸರ್ಕಾರ ಒತ್ತಡಕ್ಕೆ ಮಣಿದು ತನ್ನ ನಿಲುವು ಬದಲಿಸಿ ಮತ್ತೆ ಬದಲಾವಣೆ ಮಾಡಿದರೆ ಅದು ಇತಿಹಾಸ ಹಾಗೂ ಬಸವತತ್ವಗಳಿಗೆ ವಿರೋಧವಾಗುತ್ತದೆ. ಇಂತಹ ನಿರ್ಧಾರವನ್ನು ಸರ್ಕಾರ ಕೈಗೊಂಡರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಸವರಾಜ ರೊಟ್ಟಿ ಎಚ್ಚರಿಸಿದ್ದಾರೆ.ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.