ಬೆಳಗಾವಿ-08 : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ ಭ್ರಷ್ಟಾಚಾರದಲ್ಲಿ ಭಾಗಿ ಯಾಗಿರುವ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಮೇಲೆ ಕಾನೂನಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ರಾಜ್ಯ ಯುವ ಘಟಕದ ಕಾರ್ಯಕರ್ತರಿಂದ ಜಿಲ್ಲಾಧಿಕಾರಿಗಳ ಕಛೇರಿ ಎಂದುರು ಪ್ರತಿಭಟನೆಯ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡರು. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ರೂ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಕೆಲವು ಅಧಿಕಾರಿಗಳು ಹಾಗೂ ರಾಜಕಾರಣಿಗಳು ಸೇರಿ ವಾಲ್ಮೀಕಿ ನಾಯಕ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಪರಿಶಿಷ್ಟ ಪಂಗಡ ಜಾತಿ ಮತ್ತು ಪಂಗಡದ ಸಮುದಾಯಕ್ಕೆ ಯೋಜನೆ ಅನುದಾನ ಕನಿಷ್ಠ ಶೇಕಡಾ 20% ಮಾತ್ರ ಪಲಾನುಭವಿಗಳಿಗೆ 3 ರಿಂದ 4 ವರ್ಷಗಳು ನಿಗಮಗಳಿಗೆ ಓಡಾಡಬೇಕಾಗಿದೆ. ಇಂತಹ ಸ್ಥಿತಿಯಲ್ಲಿ ನಿಗಮದ ಹಣದಲ್ಲಿ ಅಧಿಕಾರಿಗಳು ಮತ್ತು ರಾಜಕಾರಣಿಗಳು ಸೇರಿಕೊಂಡು 187 ಕೋಟಿ ರೂ ಭ್ರಷ್ಟಾಚಾರ ಮಾಡಿರುವವರ ವಿರುದ್ದ ಕಾನೂನಿನ ಕಠಿಣ ಕ್ರಮ ಕೈ ಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡರು. ಒಂದು ವೇಳೆ ಭ್ರಷ್ಟಾಚಾರ ಏಸಗಿರುವವರ ಮೇಲೆ ಕ್ರಮ ಕೈಗೊಳ್ಳಲಿದ್ದರೆ ಎಲ್ಲ ಹಿಂದುಳಿದ ವರ್ಗಗಳು ಸೇರಿಕೊಂಡು ಬೃಹತ್ ಪಾದಯಾತ್ರೆ ಮೂಲಕ ವಿಧಾನಸೌದಕ್ಕೆ ಮುತ್ತಿಗೆ ಹಾಕುವುದಾಗಿ ಪ್ರತಿಭಟನೆಯ ಮೂಲಕ ಎಚ್ಚರಿಸಿದರು.