23/12/2024
IMG-20240708-WA0014

ಮಹಾತ್ಮರ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಕೆ- ಪೀರನವಾಡಿ ಹಜರತ್ ಶಾ ಅನ್ಸಾರಿ ಆರ್.ಎಚ್. ದರ್ಗಾಗೆ ಭೇಟಿ ನೀಡಿ ಪಾರ್ಥನೆ ಸಲ್ಲಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

ಬೆಳಗಾವಿ-08: ಚಿಕ್ಕೋಡಿ ಸಂಸದೆಯಾದ ಬಳಿಕ ಪ್ರಿಯಂಕಾ ಜಾರಕಿಹೊಳಿ ಅವರು ಜಿಲ್ಲೆಯ ವಿವಿಧ ಮಠಗಳಿಗಳಿಗೆ ಭೇಟಿ ನೀಡುತ್ತಿದ್ದು, ಅದರಂತೆ ಸೋಮವಾರವೂ ನೆಹರು ನಗರದ ನಾಗನೂರು ರುದ್ರಾಕ್ಷಿಮಠಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿಯವರು ಭೇಟಿ ನೀಡಿ ಡಾ. ಅಲ್ಲಮಪ್ರಭು ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಗೆಲುವು ಸಾಧಿಸಿ, ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ನಾಗನೂರು ಮಠಕ್ಕೆ ಭೇಟಿ ನೀಡಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರನ್ನು ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಸ್ವಾಮೀಜಿಗಳು ಆಶೀರ್ವದಿಸಿ, ಸತ್ಕರಿಸಿದರು.

ಇದೇ ವೇಳೆ ವಚನ ಸಾಹಿತ್ಯಕ್ಕೆ ಸಂಭಂದಿಸಿದ ಸುಮಾರು 30 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿದ ಗ್ರಂಥಾಲಯವನ್ನು ಸಂಸದೆ ಪ್ರಿಯಂಕಾ ಜಾರಕಿಹೊಳಿ ವೀಕ್ಷಿಸಿ ಪುಸ್ತಕಗಳಗ ಬಗ್ಗೆ ಮಾಹಿತಿ ಪಡೆದರು. ಅಲ್ಲದೇ 12 ನೇ ಶತಮಾನದ ತಾಳೆ ಗೇರೆಯಲ್ಲಿ ಬರೆದ ವಚನಗಳನ್ನು ವೀಕ್ಷಿಸಿದರು.

ಮಹಾತ್ಮರ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿ, ಪೀರನವಾಡಿ ದರ್ಗಾಗೆ ಭೇಟಿ: ನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕ‌ರ್, ಕಿತ್ತೂರು ರಾಣಿ ಚನ್ನಮ್ಮ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಮಾಹಾರಾಜ, ಶ್ರೀ ಜಗಜ್ಯೋತಿ ಬಸವೇಶ್ವರ, ಸಂಭಾಜಿ ಮಹಾರಾಜ, ಮಹರ್ಷಿ ವಾಲ್ಮೀಕಿ ಪ್ರತಿಮೆಗಳಿಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಮಾಲಾರ್ಪಣೆ ಮಾಡಿದರು.

ದೆಹಲಿ ಸಂಸತ್‌ ಭವನದಲ್ಲಿ ಲೋಕಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಮಹಾಪುರುಷರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.

ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ವೇಳೆ ವಾಲ್ಮೀಕಿ ಸಮಾಜದ ಗುರುಗಳು, ಸಮಾಜದ ಮುಖಂಡರು ಸಂಸದೆ ಪ್ರಿಯಂಕಾ ಜಾರಕಿಹೊಳಿಗೆ ವಾಲ್ಮೀಕಿ ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ, ತಂದೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಚರ್ಚಿಸಿ, ವಾಲ್ಮೀಕಿ ಮೂರ್ತಿ ಸ್ಥಾಪನೆಗೆ ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಪೀರನವಾಡಿ ದರ್ಗಾಕ್ಕೆ ಭೇಟಿ: ಪೀರನವಾಡಿ ಹಜರತ್ ಶಾ ಅನ್ಸಾರಿ ಆರ್.ಎಚ್. ದರ್ಗಾಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ ನೀಡಿ ಪಾರ್ಥನೆ ಸಲ್ಲಿಸಿದರು. ಇದೇ ವೇಳೆ ಮುಸ್ಲಿಂ ಸಮಾಜದ ಮುಖಂಡರು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರನ್ನು ಶಾಲು ಹೊದಿಸಿ ಸತ್ಕರಿಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ, ಲೋಕಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬೆಳಗಾವಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಮಹಾತ್ಮರ ಪ್ರತಿಮೆಗಳಿಗೆ ಗೌರವ ಸಲ್ಲಿಸಿದ್ದೇನೆ. ಸಂವಿಧಾನ ಉಳಿದರೆ ದೇಶ ಉಳಿಯುತ್ತದೆ. ಹೀಗಾಗಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕ‌ರ್ ಅವರು ಬರೆದ ಸಂವಿಧಾನ ಹೆಸರಿನಲ್ಲಿ ಪ್ರಮಾಣ ಸ್ವೀಕಾರ ಮಾಡಿದ್ದೇನೆ. ತಂದೆ, ಸಚಿವರಾದ ಸತೀಶ್‌ ಜಾರಕಿಹೊಳಿ ಅವರೂ ಸಂವಿಧಾನ ಹೆಸರಿನಲ್ಲಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ, ಅವರ ಮಾರ್ಗದಲ್ಲಿ ನಾನು ಸಾಗುತ್ತಿದ್ದೇನೆ ಎಂದು ತಿಳಿಸಿದರು.

ಚಿಕ್ಕೋಡಿ ಜಿಲ್ಲಾ ರಚನೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕಿಯಿಸಿ, ಬಹುವರ್ಷಗಳಿಂದ ಚಿಕ್ಕೋಡಿ ಜಿಲ್ಲೆಯಾಗಬೇಕೆಂಬ ಆ ಭಾಗದ ಜನರ ಆಸೆ, ಬೇಡಿಕೆ ಇದೆ, ಆದಷ್ಟೂ ಬೇಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸತೀಶ್‌ ಶುಗರ್ಸ್‌ ನಿರ್ದೇಶಕ, ಯುವ ನಾಯಕ ರಾಹುಲ್‌ ಜಾರಕಿಹೊಳಿ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್‌, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ, ಮುಖಂಡರಾದ ರಾಜೇಂದ್ರ ಪಾಟೀಲ್, ಸಿದ್ದಿಕ್‌ ಅಂಕಲಗಿ, ಬಸವರಾಜ ಶೇಂಗಾವಿ, ಅರ್ಜುನ ನಾಯಕವಾಡಿ, ಮಲಗೌಡ ಪಾಟೀಲ್, ಸುರೇಶ ಗವನ್ನವರ್, ಆಯಿಷಾ ಸನದಿ ಸೇರಿದಂತೆ ನೂರಾರು ಕಾರ್ಯಕರ್ತರು ಇತರರು ಉಪಸ್ಥಿತಿರಿದ್ದರು.

error: Content is protected !!