ಬೆಳಗಾವಿ-10:ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆಳಗಾವಿಯ ನಿವಾಸಕ್ಕೆ ಆಗಮಿಸಿ, ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು. ಇದೇ ಸಮಯದಲ್ಲಿ ಅವರನ್ನು ಸಚಿವರು ಆತ್ಮೀಯವಾಗಿ ಸನ್ಮಾನಿಸಿ, ಅವರ ರಾಜಕೀಯ ಜೀವನ ಉಜ್ವಲವಾಗಿರಲಿ ಎಂದು ಶುಭ ಕೋರಿದರು.
ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ನ ಮುಖಂಡರಾದ ಮೃಣಾಲ್ ಹೆಬ್ಬಾಳಕರ್, ರಾಹುಲ್ ಜಾರಕಿಹೊಳಿ, ಯುವರಾಜ ಕದಂ, ಮಲಗೌಡ ಪಾಟೀಲ, ಮನೋಹರ್ ಬೆಳಗಾಂವ್ಕರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.