23/12/2024
IMG-20240713-WA0002

ಬೆಳಗಾವಿ-13:ಶುಕ್ರವಾರ ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ರವರನ್ನು ಹಾಗೂ ಪಕ್ಷದ ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರನ್ನು ಬೆಂಗಳೂರಿನಲ್ಲೇ ರಣಹೇಡಿ ಕಾಂಗ್ರೆಸ್ ಸರ್ಕಾರ ಬಂಧಿಸಿದ ಹಿನ್ನೆಲೆಯಲ್ಲಿ ಕುಂದಾನಗರಿ ಬಿಜೆಪಿ ಯಿಂದ ಬೆಳಗಾವಿ ನಗರದ ಚೆನ್ನಮ್ಮ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ಟೈರ್ ಗೆ ಬೆಂಕಿ ಹಚ್ಚಿ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಭಾ.ಜ.ಪಾ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಮಾಜಿ ಶಾಸಕ ಸಂಜಯ್ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ದೇಶಪಾಂಡೆ, ಈರಯ್ಯ ಖೋತ್, ಮುರಗೇಂದ್ರಗೌಡ ಪಾಟೀಲ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಸಂತೋಷ ದೇಶನೂರ, ವಿಜಯ ಕೊಡಗಾನೂರ,ಸಿದ್ದು ಪಾಟೀಲ, ಪ್ರಸಾದ ದೇವರಮನಿ, ವಿಠ್ಠಲ ಸಾಯಣ್ಣವರ, ಸಂಜಯಕುಮಾರ ನವಲಗುಂದ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು  ಈ ಸಂದರ್ಭದಲ್ಲಿ ಹಾಜರಿದ್ದರು.

error: Content is protected !!