23/12/2024
WhatsApp Image 2024-07-17 at 11.09.06 AM

ಬೆಳಗಾವಿ-17: ವೈದ್ಯವಿಜ್ಞಾನದ ತಂತ್ರಜ್ಞಾನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಅದಕ್ಕೆ ತಕ್ಕಂತೆ ಆಸ್ಪತ್ರೆಗಳೂ ಕೂಡ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿವೆ. ವೈದ್ಯಕೀಯ ವಿಜ್ಞಾನದಲ್ಲಿ ನಿಖರವಾದ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲು ರೊಬೊಟಿಕ್ ತಂತ್ರಜ್ಞಾನ ಸಾಕಷ್ಟು ಸಹಕಾರಿಯಾಗಿದೆ. ಈ ತಂತ್ರಜ್ಞಾನವನ್ನು ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಅಳವಡಿಸಲಾಗಿದೆ. ಅಲ್ಲದೇ ರೊಬೊಟನಿಂದ ಇಬ್ಬರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ.

ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿ,ಈ ವಿಷಯವನ್ನು ತಿಳಿಸಿದ ಅವರು,ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. (ಕರ್ನಲ್) ಎಂ ದಯಾನಂದ ಅವರು, ಕಳೆದ ಮೂರು ದಶಕಗಳ ಹಿಂದೆ ವೈದ್ಯವಿಜ್ಞಾನದ ತಂತ್ರಜ್ಞಾನಕ್ಕೆ ಪರಿಚಿತವಾದ ರೊಬೊಟಿಕ್ ಇಂದು ಕ್ರಾಂತಿಕಾರಿ ತಂತ್ರಜ್ಞಾನವಾಗಿದೆ. ಶಸ್ತ್ರಚಿಕಿತ್ಸೆಯಲ್ಲಿ ಅದ್ಭುತ ಕೊಡುಗೆ ನೀಡುತ್ತ ನಿರಂತರವಾಗಿ ಅಭಿವೃದ್ದಿಗೊಳ್ಳುತ್ತಿದೆ. ರೊಬೊಟಿಕ್ ನಿಂದ ವೈದ್ಯರು ಅತ್ಯಂತ ಕ್ಲಿಷ್ಟಕರವಾದ ಹಾಗೂ ಸಂಕೀರ್ಣತೆಯಿಂದ ಕೂಡಿದ ಶಸ್ತ್ರಚಿಕಿತ್ಸೆಗಳನ್ನು ನೆರವೇರಿಸಲು ಸಹಕಾರಿಯಾಗಲಿದೆ.
ಈಗಾಲೇ ರೊಬೊಟಿಕ್ ತಂತ್ರಜ್ಞಾನವನ್ನು ವಿವಿಧ ಕೈಗಾರಿಕೆಗಳಲ್ಲಿ ಅಪಾರವಾಗಿ ಬಳಸಲಾಗುತ್ತಿದೆ. ಆದರೆ ಕಳೆದ ಎರಡು ದಶಕಗಳಲ್ಲಿ ರೊಬೊಟಿಕ್ ತಂತ್ರಜ್ಞಾನವು ಆರೋಗ್ಯ ಕ್ಷೇತ್ರದಲ್ಲೂ ವಿಶ್ವಾರ್ಹತೆಯನ್ನು ಗಳಿಸುತ್ತಿದೆ. ರೊಬೊಟಿಕ್ ಶಸ್ತ್ರಚಿಕಿತ್ಸೆಯ ವಿಧಾನವು ನಿರಂತರವಾಗಿ ಅಭಿವೃದ್ದಿಗೊಳ್ಳುತ್ತಲಿರುತ್ತದೆ. ರೊಬೊಟ್ ಶಸ್ತ್ರಚಿಕಿತ್ಸಾ ಉಪಕರಣಗಳನ್ನು ವೈದ್ಯರಿಗೆ ನೀಡುವದು, ಅತ್ಯಂತ ಸಂಕೀರ್ಣವಾದ ಶಸ್ತ್ರಚಿಕಿತ್ಸಾ ವಿಧಾನಗಳನ್ನು ನಿರ್ವಹಿಸುವುದು ಸೇರಿದಂತೆ ಅನೇಕ ಕಾರ್ಯಗಳನ್ನು ನಿರ್ವಹಿಸುತ್ತದೆ. ರೊಬೊಟಿಕ್ ಸಹಕಾರದಿಂದ ನೆರವೇರಿಸುವ ಕ್ಯಾನ್ಸರನ ಶಸ್ತ್ರಚಿಕಿತ್ಸೆಯು ಅತಯ್ಯಂತ ಪರಿಣಾಮಕಾರಿ ಎಂದು ಕಂಡು ಬಂದಿದೆ. ರೊಬೊಟಿಕ್ ಶಸ್ತ್ರಚಿಕಿತ್ಸೆಯು ಲ್ಯಾಪರೊಸ್ಕೋಪಿಕ್ ಮತ್ತು ತೆರೆದ ಶಸ್ತ್ರಚಿಕಿತ್ಸೆ ಎರಡಕ್ಕೂ ಸೈ ಎನಿಸಿಕೊಂಡಿದೆ.
1. ನಿಖರತೆ: 3ಡಿ ತಂತ್ರಜ್ಞಾನ, ಹೈಡೆಪಿನೇಶನ್ ಕ್ಯಾಮರಾ ಹಾಗೂ ಅತ್ಯಾಧುನಿಕ ಉಪರಣಗಳನ್ನು ಹೊಂದಿರುವದರಿಂದ ಶಸ್ತ್ರಚಿಕಿತ್ಸೆಯ ಸ್ಥಳವನ್ನು ನಿಖರವಾಗಿ ತಲುಪಬಹುದು. ಇದರಿಂದ ಅತ್ಯಂತ ಸಂಕೀರ್ಣತೆಯಿಂದ ಕೂಡಿದ ಶಸ್ತ್ರಚಿಕಿತ್ಸೆಯನ್ನು ಸುಲಭವಾಗಿ ನೆರವೇರಿಸಲು ಸಹಕರಿಸುತ್ತದೆ.
2. ಕಡಿಮೆ ಗಾಯ: ತೆರೆದ ಶಸ್ತ್ರಚಿಕಿತ್ಸೆಗೆ ಹೋಲಿಸಿದರೆ, ರೊಬೊಟಿಕ್ ಶಸ್ತ್ರಚಿಕಿತ್ಸೆಗೆ ಸಣ್ಣ ರಂದ್ರದ ಅಗತ್ಯವಿರುತ್ತದೆ. ಇದರಿಂದ ಸುತ್ತಮುತ್ತಲಿನ ಅಂಗಾಂಶಗಳಿಗೆ ಕಡಿಮೆ ತೊಂದರೆಯುಂಟಾಗುತ್ತದೆ. ಅಲ್ಲದೇ ರಕ್ತಸ್ರಾವ ಕಡಿಮೆಗೊಂಡು, ರೋಗಿಗಳು ಶೀಘ್ರವಾಗಿ ಗುಣಮುಖಗೊಳ್ಳುತ್ತಾರೆ.
3. ಸುಧಾರಿತ ದಕ್ಷತೆ : ರೊಬೊಟಿಕ್ ತಂತ್ರಜ್ಞಾನವು ಶಸ್ತ್ರಚಿಕಿತ್ಸಕರಿಗೆ ಸಾಂಪ್ರದಾಯಿಕ ಲ್ಯಾಪರೊಸ್ಕೋಪಿಕ್ ಉಪಕರಣಕ್ಕಿಂತ ಹೆಚ್ಚು ಸಹಕಾರಿಯಾಗಿದೆ. ಮತ್ತು ದೀರ್ಘಾವಧಿವರೆಗಿನ ಶಸ್ತ್ರಚಿಕಿತ್ಸೆಗಳನ್ನು ಅನಾಯಾಸವಾಗಿ ನೆರವೇರಿಸುವದರಿಂದ ಶಸ್ತ್ರಚಿಕಿತ್ಸಕರ ಮೆಲಿನ ದೈಹಿಕ ಒತ್ತಡವನ್ನು ಕಡಿಮೆ ಮಾಡಲಿದೆ.
4. ತೆರೆದ ಶಸ್ತ್ರಚಿಕಿತ್ಸೆಗೆ ಒಳಗಾಗುವ ರೋಗಿಗಳಿಗೆ ಹೋಲಿಸಿದರೆ ರೋಬೋಟಿಕ್ ಶಸ್ತ್ರಚಿಕಿತ್ಸೆಗೊಳಗಾದ ರೋಗಿಗಳಲ್ಲಿ ಸೋಂಕಿನ ಅಪಾಯ ಕಡಿಮೆಯಿದ್ದು, ಶೀಘ್ರ್ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಳ್ಳುತ್ತಾರೆ. ಅಲ್ಲದೇ
ಲ್ಯಾಪರೊಸ್ಕೋಪಿಕ್ ಮತ್ತು ತೆರೆದ ಶಸ್ತ್ರಚಿಕಿತ್ಸಾ ವಿಧಾನಗಳಿಗಿಂತ ಹೆಚ್ಚಿನ ಸಂದರ್ಭಗಳಲ್ಲಿ ಇದನ್ನು ಆದ್ಯತೆಯನ್ನಾಗಿ ಮಾಡುವದರಿಂದ ಹಲವಾರು ಪ್ರಯೋಜನಗಳಿವೆ. ರೊಬೊಟಿಕ್ ಶಸ್ತ್ರಚಿಕಿತ್ಸೆಯು ರೋಗಿಗಳ ಮೇಲೆ ಧನಾತ್ಮಕವಾಗಿ ಪರಿಣಾಮ ಬೀರಿದರೂ ಕೂಡ ಮೂಲಸೌಕರ್ಯ, ಉಪಕರಣಗಳ ಆಮದು ವೆಚ್ಚದಿಂದಾಗಿ ಈ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ನಿಧಾನಗತಿ ಇದೆ.
ಉತ್ತರ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ರೊಬೊಟಿಕ್ ತಂತ್ರಜ್ಞಾನವನ್ನು ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವು ಅಳವಡಿಸಿಕೊಂಡಿದೆ. ಭಾರತದಲ್ಲಿಯೇ ತಯಾರಿಸಿದ ಎಸ್ಎಸ್ಐ ತಂತ್ರಜ್ಞಾನ ಸರ್ಜಿಕಲ್ ರೊಬೊಟಿಕ್ ಇದಾಗಿದ್ದು, ಅತ್ಯಂತ ನಿಖರತೆಯಿಂದ ಕೂಡಿದ ಶಸ್ತ್ರಚಿಕಿತ್ಸೆಯನ್ನು ನೆರವೇರಿಸುವಲ್ಲಿ ಸಹಕಾರಿಯಾಗಿದೆ.
ರೊಬೊಟಿಕ್ ತಂತ್ರಜ್ಞಾನದಿಂದ ಇಬ್ಬರು ಕ್ಯಾನ್ಸರ ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಗಿದೆ. ಅನ್ನನಾಳ ಕ್ಯಾನ್ಸರನಿಂದ ಬಳಲುತ್ತಿದ್ದ 62 ಮತ್ತು 70 ವರ್ಷದ ರೋಗಿಗಳಿಗೆ ಸುಮಾರು 8 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು. ಕ್ಯಾನ್ಸರ ಶಸ್ತ್ರಚಿಕಿತ್ಸಕರಾದ ಡಾ. ಮಹೇಶ ಕಲ್ಲೋಳ್ಳಿ, ಡಾ. ಕುಮಾರ ವಿಂಚುರಕರ ಹಾಗೂ ಡಾ. ದಿವಾಕರ, ಡಾ. ರಾಹುಲ್ ಕಿನವಾಡೆಕರ ಅವರಿಗೆ ಅರವಳಿಕೆ ತಜ್ಞವೈದ್ಯರಾದ ಡಾ. ರಾಜೇಶ ಮಾನೆ ಅವರು ಸಹಕರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕ್ಯಾನ್ಸರ ತಜ್ಞವೈದ್ಯರಾದ ಡಾ. ಕುಮಾರ ವಿಂಚುರಕರ ಹಾಗೂ ಡಾ. ಮಹೇಶ ಕಲ್ಲೋಳ್ಳಿ ಹಾಜರಿದ್ದರು.

 

error: Content is protected !!