23/12/2024
IMG-20240719-WA0003

ಬೆಳಗಾವಿ-19:ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವಂತೆ ಒತ್ತಾಯಿಸಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಆರ್ ಅಭಿಲಾಷ್ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು

ಕರ್ನಾಟಕದಲ್ಲಿ ಲಕ್ಷಾಂತರ ಜನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಗ್ಸಿ, ಖಾಸಗಿ ಕಂಪನಿಗಳಲ್ಲಿ ಕೆಲಸಕ್ಕಾಗಿ ಪರದಾಡುವ ಪರಿಸ್ಥಿತಿ ಉಂಟಾಗಿದೆ ಏಕೆಂದರೆ ಬೇರೆ ರಾಜ್ಯದ ಜನರು ಹೆಚ್ಚಿನ ಪ್ರಮಾಣದಲ್ಲಿ ಆ ಕೆಲಸಗಳನ್ನು ಪಡೆದುಕೊಳ್ಳುತ್ತಿದ್ದಾರೆ…. ಇದರಿಂದ ಅರ್ಹತೆ ಇದ್ದರೂ ಸಹ ನಮ್ಮ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ…. ಈ ನಿಟ್ಟಿನಲ್ಲಿ ಸರ್ಕಾರ ಈ ಕೂಡಲೇ ಖಾಸಗಿ ಕಂಪನಿಗಳಲ್ಲಿ ಕಡ್ಡಾಯವಾಗಿ ಕನ್ನಡಿಗರಿಗೆ ಮೀಸಲಾತಿಯನ್ನು ನೀಡುವಂತೆ ಆದೇಶಿಸಬೇಕಾಗಿ ಹೋರಾಟ ಮಾಡಲಾಯಿತು.

ಈ ಸಂದರ್ಭದಲ್ಲಿ ಆರ್.ಅಭಿಲಾಷ ಸೇರಿದಂತೆ ಇತರರು ಉಪಸ್ಥಿತಿರಿದ್ದರು.

error: Content is protected !!