ಬೆಳಗಾವಿ-06 :ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ಮಾಜಿ ಶಾಸಕ ಅನಿಲ್ ಬೆನಕೆ ಅವರನ್ನು ಕ್ಷತ್ರಿಯ ಮರಾಠ ಪರಿಷತ್ ಬೆಳಗಾವಿ ಜಿಲ್ಲಾ ಮತ್ತು ತಾಲೂಕು ಘಟಕದ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸನ್ಮಾನಿಸಿದರು.
ಸನ್ಮಾನಕ್ಕೆ ಪ್ರತಿಕ್ರಿಯಿಸಿದ ಅನಿಲ್ ಬೆನಕೆ ಅವರು, ಬೆಳಗಾವಿ ಜಿಲ್ಲೆಯಲ್ಲಿ ಮರಾಠಾ ಸಮುದಾಯದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮರಾಠಾ ಸಮುದಾಯದ ಬೇಡಿಕೆಗಳ ಅರಿವಿದೆ. ಈ ನಿಟ್ಟಿನಲ್ಲಿ ಮರಾಠಾ ಸಮುದಾಯಕ್ಕೆ ಅಗತ್ಯವಾದ ಮೀಸಲಾತಿ ಹಾಗೂ ಅಗತ್ಯ ನಿವೇಶನ ಕುರಿತು ಚರ್ಚಿಸಲಾಗುವುದು. ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕುಗಳ ಪದಾಧಿಕಾರಿಗಳ ಸಭೆಯನ್ನು ಇಷ್ಟರಲ್ಲೇ ಕರೆಯುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಡಾ. ಸೋನಾಲಿ ಸರ್ನೋಬತ್ , ಡಿ.ಬಿ. ಪಾಟೀಲ, ಸಂಜಯ್ ಭೋಸಲೆ, ರೋಹನ ಕದಮ್, ಸತೀಶ ಬಾಚಿಕರ್, ಡಾ.ಸಮೀರ್ ಸರ್ನೋಬತ್ ಮತ್ತು ಸಂಘದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.