ಬೆಳಗಾವಿ– 21: ಬೆಳಗಾವಿ ತಾಲ್ಲೂಕಿನಲ್ಲಿ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.22 ಮತ್ತು ಜು.23 ರಂದು ರಜೆ ಘೋಷಿಸಲಾಗಿದೆ.
ಅದೇ ರೀತಿ ಖಾನಾಪುರ ತಾಲ್ಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೂ ಜುಲೈ 22 ಮತ್ತು 23 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ರಜೆ ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.