ಬೆಳಗಾವಿ-22: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಳಗಾವಿ ಸಮಿತಿ ವತಿಯಿಂದ ಬೆಳಗಾವಿಯ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ರೈತ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಕೋಡಿಹಳ್ಳಿ ನೇತೃತ್ವದಲ್ಲಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ರೈತರ ಸಾಲ ಮನ್ನಾ, ಕಬ್ಬಿನ ಬಾಕಿ ಪಾವತಿ, ಕೃಷಿ ಕಾಯಿದೆ ಹಿಂಪಡೆಯುವುದು, ಕಳಸಾ ಭಂಡೂರಿ ಯೋಜನೆ ಕೂಡಲೇ ಜಾರಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಅನೇಕ ರೈತರು ಪ್ರತಿಭಟನೆ ಯಲ್ಲಿ ಭಾಗವಹಿಸಿದರು.