23/12/2024
Screenshot_2024_0724_132612

ಗೋಕಾಕ-24:ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಆರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಕೆಲ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗೋಕಾಕ ತಾಲೂಕಿನ ಗೋಕಾಕ ಪಚ್ಚಾಪುರ ರಸ್ತೆಯ ಮೇಳಿಮರಡಿ ಕ್ರಾಸ್ ನಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮಾವನೂರ, ಗೊಡಚಿನಮಲ್ಕಿ, ಮೇಲಮಟ್ಟಿ ಗ್ರಾಮಗಳ ವಿದ್ಯಾರ್ಥಿಗಳನ್ನು ಹೊತ್ತ ಶಾಲಾ ಬಸ್ ಮರಡಿಮಠ ಗ್ರಾಮದ ಕಡೆಗೆ ಹೋಗುತ್ತಿತ್ತು. ಬಸ್ ನ ಸ್ಟೇರಿಂಗ್ ಲಾಕ್ ನಿಂದಾಗಿ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಬಸ್ ಪಲ್ಟಿಯಾದಾಗ ವಿದ್ಯಾರ್ಥಿಗಳು ಗಾಬರಿಗೊಂಡು ಒಂದೇ ಸಮನೆ ಅಳಲು ತೋಡಿಕೊಂಡರು. ಅಪಘಾತ ಸಂಭವಿಸಿದ ತಕ್ಷಣ ಸುತ್ತಮುತ್ತಲಿನ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದ ರೈತರು ಸಹಾಯಕ್ಕೆ ಧಾವಿಸಿ ಗಾಯಗೊಂಡ ವಿದ್ಯಾರ್ಥಿಗಳನ್ನು ಬಸ್‌ನಿಂದ ಹೊರತೆಗೆದು ಧೈರ್ಯ ತುಂಬಿದರು. ನಂತರ ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು.ಈ ಘಟನೆ ಗೋಕಾಕ ವ್ಯಾಪ್ತಿಯಲ್ಲಿ ನಡೆದಿದ್ದು,ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಗೋಕಾಕ ಆಸ್ಪತ್ರೆಗೆ ದಾಖಲಿಸಲಾಗಿದೆ.

 

error: Content is protected !!