ಬೆಳಗಾವಿ-27: 300 ವರ್ಷಗಳ ಇತಿಹಾಸ ಹೊಂದಿರುವ ಮುತಗಾ ಗ್ರಾಮದ ಶ್ರೀ ಭಾವಕೇಶ್ವರಿ ದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಭ ಕೋರಿದ್ದಾರೆ.
ಈ ಕುರಿತು ಸಚಿವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ.
ದೇವಿಯು ಭಕ್ತರ ಎಲ್ಲ ಇಷ್ಟಾರ್ಥಗಳನ್ನು ಈಡೇರಿಸುತ್ತಾಳೆ ಎನ್ನುವ ನಂಬಿಕೆ ಇದ್ದು, ಬೇಡಿಕೆ ಈಡೇರಿಸಿಕೊಂಡ ಭಕ್ತರು ಜಾತ್ರೆಯ ಸಂದರ್ಭದಲ್ಲಿ ಹರಕೆ ತೀರಿಸುತ್ತಾರೆ. ಜಾತ್ರೆಯಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಜನ ಸೇರುವುದು ವಿಶೇಷವಾಗಿದೆ. ಜಾತ್ರಾ ಮಹೋತ್ಸವದ ಈ ಶುಭ ಸಂದರ್ಭದಲ್ಲಿ ತಾಯಿ ಭಾವಕೇಶ್ವರಿ ದೇವಿ ಸರ್ವರಿಗೂ ಸನ್ಮಂಗಳವನ್ನುಂಟು ಮಾಡಲಿ, ನಾಡಿನೆಲ್ಲೆಡೆ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.