ಬೆಳಗಾವಿ-27: ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಜುಲೈ 31 ರಂದು ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ಅವರ ಪತ್ನಿ ಶಾಲಿನಿ ರಜನೀಶ್ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಂಪುಟ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್ ಮಾಹಿತಿ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶಾಲಿನಿ ರಜನೀಶ್ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ ಎಂದರು.
ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮುಂದಿನ ಐದು ದಿನಗಳಲ್ಲಿ ನಿವೃತ್ತರಾಗಲಿದ್ದಾರೆ. ಹಾಗಾಗಿ ಶಾಲಿನಿ ರಜನೀಶ್ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲು ಸಂಪುಟ ಸಭೆ ನಿರ್ಧರಿಸಿದ್ದು, ಸಚಿವ ಎಚ್. ಕೆ. ಪಾಟೀಲ್ ಹೇಳಿದರು. ಈ ರೀತಿಯಲ್ಲಿ ಒಟ್ಟಾರೆಯಾಗಿ ಪತಿ ನಿವೃತ್ತಿಯ ನಂತರ ಅವರ ಪ್ರಮುಖ ಸ್ಥಾನವು ಅವರ ಪತ್ನಿಗೆ ಹೋಗುತ್ತದೆ.
ಶಾಲಿನಿ ರಜನೀಶ್ ಅವರು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ಹುದ್ದೆಯಲ್ಲಿದ್ದರು. ಅವರು ಜೂನ್ 2005 ರಿಂದ ಏಪ್ರಿಲ್ 2007 ರವರೆಗೆ ಒಂದು ವರ್ಷ 11 ತಿಂಗಳು ಬೆಳಗಾವಿಯ ಜಿಲ್ಲಾಧಿಕಾರಿ ಆಗಿದ್ದರು.
ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ರಾಜ್ಯದ ಹಲವು ಇಲಾಖೆಗಳ ಪ್ರಮುಖ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ.