23/12/2024
IMG-20240731-WA0001

ಬೆಳಗಾವಿ-31:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ
ಬೆಳಗಾವಿಯ ಗೃಹ ಕಚೇರಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನೂತನವಾಗಿ ನೇಮಕಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ನೇಮಕಾತಿಯ ಆದೇಶ ಪತ್ರಗಳನ್ನು ವಿತರಿಸಿದರು.

ಗ್ರಾಮೀಣ ಕ್ಷೇತ್ರದಲ್ಲಿ ಒಟ್ಟು 43 ಜನ ಅಂಗನವಾಡಿ ಸಹಾಯಕಿಯರು ಹಾಗೂ 6 ಜನ ಕಾರ್ಯಕರ್ತೆಯರು ನೇಮಕಗೊಂಡಿದ್ದು, ಇವತ್ತು ಆದೇಶಗಳನ್ನು ವಿತರಿಸಿದ ಸಚಿವರು, ಶುಭ ಕೋರಿದರು. ಇದೇ ಸಮಯದಲ್ಲಿ ಕಾರ್ಯಕರ್ತೆಯರಿಗೆ ಹೊಸ‌ ಮೊಬೈಲ್ ಹ್ಯಾಂಡ್ ಸೆಟ್ ಗಳನ್ನು ಸಹ ವಿತರಿಸಲಾಯಿತು.

ಈ ಸಮಯದಲ್ಲಿ ಇಲಾಖೆಯ ಉಪ ನಿರ್ದೇಶಕ ನಾಗರಾಜ, ಸಿಡಿಪಿಓ ಸುಮಿತ್ರಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.

error: Content is protected !!