ತಿರುವನಂತಪುರಂ-01: ವಯನಾಡು ಭೂಕುಸಿತದ ಬಗ್ಗೆ ಎಚ್ಚರಿಕೆ ನೀಡಿದರೂ ಕೇರಳ ಕ್ರಮ ಕೈಗೊಂಡಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರಸ್ಕರಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ಭೂಕುಸಿತದ ಬಗ್ಗೆ ಯಾವುದೇ ರೀತಿಯ ಮುನ್ನೆಚ್ಚರಿಕೆ ಬಂದಿರಲಿಲ್ಲ. ಅಮಿತ್ ಶಾ ಹೇಳಿರುವುದು ಸುಳ್ಳಾಗಿದೆ. ಈ ಸಂಕಷ್ಟದ ಸಮಯದಲ್ಲಿ ಒಬ್ಬರನ್ನೊಬ್ಬರು ದೂಷಿಸಿಕೊಳ್ಳುವ ಬದಲು ದುರಂತಕ್ಕೀಡಾದ ಸಂತ್ರಸ್ತರ ನೆರವಿಗೆ ಮುಂದಾಗಬೇಕು. ಇದು ಒಬ್ಬರನ್ನೊಬ್ಬರು ದೂಷಿಸುವ ಸಮಯವಲ್ಲ. ವಾಸ್ತವಾಂಶ ಎಲ್ಲರಿಗೂ ಗೊತ್ತಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.