23/12/2024
IMG-20240107-WA0034

ಬೆಂಗಳೂರು,-07: ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ 50 ಲಕ್ಷ ರೂ.ಗಳ ಅನುದಾನವನ್ನು ಪರಿಷತ್ತಿಗೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕರ್ನಾಟಕ ಚಿತ್ರಕಲಾ ಪರಿಷತ್ ವತಿಯಿಂದ ಆಯೋಜಿಸಿರುವ 21 ನೇ ಚಿತ್ರ ಸಂತೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

*ಆರ್ಟ್ ಗ್ಯಾಲರಿ ಸ್ಥಾಪಿಸಲು ನೆರವು*
ಎಲ್ಲಾ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ ಎಂದರು.

2003 ರಿಂದ ಇಂದಿನವರೆಗೆ ಚಿತ್ರಸಂತೆ ಆಚರಣೆಯಾಗುತ್ತಿದೆ. ಈ ವರ್ಷ 21 ನೇ ಚಿತ್ರಸಂತೆ ನಡೆದಿದೆ. ಹಿಂದೆ ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಪ್ರತಿ ವರ್ಷ ಚಿತ್ರಸಂತೆಯನ್ನು ಉದ್ಘಾಟಿಸಿದ್ದೇನೆ ಎಂದು ಸ್ಮರಿಸಿದರು.

*22 ರಾಜ್ಯಗಳಿಂದ 1600 ಕಲಾವಿದರು*
ಪ್ರತಿ ವರ್ಷ 3 ರಿಂದ 4 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. 22 ರಾಜ್ಯಗಳಿಂದ 1600 ಕಲಾವಿದರು ಪಾಲ್ಗೊಳ್ಳುವುದು ಹೆಮ್ಮೆಯ ವಿಷಯ. ಈ ಬಾರಿ ಚಿತ್ರಸಂತೆಯನ್ನು ಬಾಹ್ಯಾಕಾಶ ವಿಜ್ಞಾನಿಗಳಿಗೆ ಸಮರ್ಪಣೆಯಾಗಿರುವುದು ಅವರಿಗೆ ಸಲ್ಲಿಸಿರುವ ವಿಶೇಷವಾದ ಗೌರವ ಸೂಚಿಸುತ್ತದೆ ಎಂದರು.

ಚಿತ್ರಸಂತೆಯಲ್ಲಿ ಭಾಗವಹಿಸಿದ ಎಲ್ಲಾ ಕಲಾವಿದರಿಗೂ ಕರ್ನಾಟಕದ ಪರವಾಗಿ ಸ್ವಾಗತಿಸಿದರು.

ಸಚಿವರಾದ ಹೆಚ್.ಕೆ.ಪಾಟೀಲ್ , ಸುಧಾಕರ್ , ಶಾಸಕರಾದ ರಿಜ್ವಾನ್ ಅರ್ಷದ್, ಅಜಯ್ ಸಿಂಗ್ , ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್ ಶಂಕರ್, ಉಪಾಧ್ಯಕ್ಷ ಪ್ರಭಾಕರ್ ಉಪಸ್ಥಿತರಿದ್ದರು.

error: Content is protected !!