ಬೆಳಗಾವಿ-04: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಹ ಸಿಎಂ ಜೊತೆ ಪ್ರಯಾಣಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿಗಳ ಜೊತೆಗೆ ಬೆಂಗಳೂರಿನಿಂದ ಹೊರಟು, 11.10ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಲಕ್ಷ್ಮೀ ಹೆಬ್ಬಾಳಕರ್, ಮಧ್ಯಾಹ್ನ 12.15ರಿಂದ ಸಂಜೆ 6.30ರ ವರೆಗೆ ಜಿಲ್ಲೆಯ ಗೋಕಾಕ, ಕಾಗವಾಡ ಹಾಗೂ ಚಿಕ್ಕೋಡಿ ತಾಲೂಕುಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ.
ಸಂಜೆ 6.40ಕ್ಕೆ ಸಿಎಂ ಜೊತೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಸಚಿವರೂ ಪ್ರಯಾಣ ಬೆಳೆಸಲಿದ್ದಾರೆ.