ಬೆಳಗಾವಿ-05: ಲೋಕಸಭಾ ಚುನಾವಣೆಯಲ್ಲಿ ಪರಾಜಿತರಾದರೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಕೈ ಕಟ್ಟಿ ಕುಳಿತಿಲ್ಲ. ನಿರಂತರವಾಗಿ ಜನರ ನೋವು- ನಲಿವಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಕಳೆದೆ ಒಂದು ವಾರದಿಂದ ಪ್ರವಾಹ ಪೀಡಿತ ಪ್ರದೇಶದಲ್ಲಿ ಸಂಚರಿಸುತ್ತಿರುವ ಮೃಣಾಲ ಹೆಬ್ಬಾಳಕರ್, ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಆರ್ಥಿಕ ಸಹಾಯವನ್ನೂ ಮಾಡುತ್ತಿದ್ದಾರೆ.
ಗೋಕಾಕ, ಅರಬಾವಿ ಕ್ಷೇತ್ರಗಳ ಪ್ರವಾಹ ಪೀಡಿತ ಪ್ರದೇಶಗಳಲ್ಲಿ 2 -3 ದಿನಗಳ ಹಿಂದೆ ಸಂಚರಿಸಿರುವ ಮೃಣಾಲ ಹೆಬ್ಬಾಳಕರ್, ಭಾನುವಾರ ಪ್ರವಾಹಪೀಡಿತ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ.ಕೆ ಗ್ರಾಮಕ್ಕೆ ಭೇಟಿ ನೀಡಿದ್ದರು. ಹಾನಿಗೊಳಗಾಗಿರುವ ಸ್ಥಳಗಳ ವೀಕ್ಷಣೆ ನಡೆಸಿದ ಅವರು ಸಮಗ್ರ ಮಾಹಿತಿಯನ್ನು ಪಡೆದರು.
ಸಂತ್ರಸ್ತರಿಗೆ ಧೈರ್ಯ ತುಂಬಿ, ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು. ಕೆಲವು ಕುಟುಂಬಗಳಿಗೆ ಲಕ್ಷ್ಮೀತಾಯಿ ಫೌಂಡೇಷನ್ ವತಿಯಿಂದ ಆರ್ಥಿಕವಾಗಿ ಸಹಾಯವನ್ನೂ ಮಾಡಿದರು.
ಈ ಸಮಯದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಗ್ರಾಮದ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಚುನಾವಣೆಯಲ್ಲಿ ಸೋತರೂ ನಿರಂತರ ಜನಸೇವೆಯಲ್ಲಿ ತೊಡಗಿರುವ ಮೃಣಾಲ ಹೆಬ್ಬಾಳಕರ್ ಅವರ ಕಾರ್ಯಶೈಲಿಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.