23/12/2024
IMG-20240806-WA0003

ಬೆಳಗಾವಿ-06:ಮಂಗಳವಾರ ನಗರದಲ್ಲಿ ಶೋಷಿತ ಸಮುದಾಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡಲು ಹುನ್ನಾರ ನಡೆಸಿರುವ ಬಿಜೆಪಿ ನಡೆಯನ್ನು ಖಂಡಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘ, ಶೋಷಿತ ಸಮಹದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳು ಚನ್ನಮ್ಮ‌ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸಿಎಂ ಸಿದ್ದರಾಮಯ್ಯನವರ ಭಾವ ಚಿತ್ರಕ್ಕೆ ಹಾಲಿನ ಅಭಿಷೇಕ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ರವಾನಿಸಿದರು.

ಇತ್ತೀಚಿಗೆ ರಾಜ್ಯದಲ್ಲಿ ಕೋಮುವಾದಿಗಳು ಮತ್ತು ಜಾತಿವಾದಿ ಪಟ್ಟಬದ್ಧ ಹಿತಾಸಕ್ತಿಗಳು ಅಧಿಕಾರ ದಾಹ ಮತ್ತು ಖುರ್ಚಿ ಆಸೆಗಾಗಿ ಜನಪರ ಇರುವ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ದೊಡ್ಡ ಮಟ್ಟದ ಪಡ್ಯಂತ್ರ ರೂಪಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ 15 ಬಾರಿ ಬಜೆಟ್ ಮಂಡಿಸಿದ ಹಣಕಾಸು ಸಚಿವ ಸೇರಿದಂತೆ 40 ವರ್ಷಗಳ ಸುದೀರ್ಗ ರಾಜಕೀಯದಲ್ಲಿ ಹಲವು ಮಹತ್ವದ ಅಧಿಕಾರದ ಹುದ್ದೆಯಲ್ಲಿದ್ದರೂ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದ ನಾಯಕ ಸಿದ್ಧರಾಮಯ್ಯನವರ ವರ್ಚಸ್ಸಿಗೆ ಮಸಿ ಬಳಿಯಲು, ಅವರನ್ನು ರಾಜಕೀಯವಾಗಿ ಮುಗಿಸಿಯೇ ಬಿಡುವ ಹುನ್ನಾರ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ಜೆಡಿಎಸ್ ನಾಯಕ ಮತ್ತು ಕೇಂದ್ರ ಸರ್ಕಾರದ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಬಿಜೆಪಿ ನಾಯಕರಾದ ಅಶೋಕ, ಬಿ.ವಾಯ್. ವಿಜಯೇಂದ್ರ ಮತ್ತೀತರರು ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಿರುವುದರ ಹಿಂದೆ ಹಲವು ಕಾರಣಗಳಿವೆ. ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಿ ಹಿಂದುಳಿದ ವರ್ಗಗಳ ನಾಯಕತ್ವವನ್ನು ಕೊನೆಗೊಳಿಸಬಹುದು. ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಿ ಬಿಟ್ಟರೆ ಶಾಶ್ವತವಾಗಿ ಹಿಂದುಳಿದ ವರ್ಗದವರನ್ನು ಅಧಿಕಾರದಿಂದ ದೂರವಿಡಬಹುದು ಎನ್ನುವ ಕುತಂತ್ರ ಬಿಜೆಪಿ ಜೆಡಿಎಸ್ ನಾಯಕರದ್ದಾಗಿದೆ ಎಂದು ದೂರಿದ್ದಾರೆ.

ಮುಡಾ ಹಗರಣದಲ್ಲಿ ಸನ್ಮಾನ್ಯ ಸಿದ್ಧರಾಮಯ್ಯನವರ ಯಾವ ಪಾತ್ರ ಇರದೇ ಇದ್ದರೂ ಬಿಜೆಪಿ ಸರ್ಕಾರದಲ್ಲಿ 50:50 ಅನುಪಾತದಲ್ಲಿ ಸೈಟ್ ಹಂಚಿಕೆ ಕಾನೂನನ್ನು ಮಾಡಿ ಆ ಸಮಯದಲ್ಲಿ ಸಿದ್ದರಾಮಯ್ಯನವರ ಪತ್ನಿಯವರಿಗೆ 3 ಎಕರೆ 26 ಗುಂಟೆ ಜಾಗೆಯನ್ನು ವಶಪಡಿಸಿಕೊಂಡು ಸುಮಾರು 1 ಎಕರೆಯಷ್ಟು (14 ಪ್ಲಾಟ್) ನೀಡಿದ್ದಾರೆ. ಇದ ಸರ್ಕಾರದ ನಿಯಮದಂತೆ ಬಿಜೆಪಿ ಸರ್ಕಾರ ನೀಡಿದ್ದು, ಈ ವಿಷಯದಲ್ಲಿ ಮಾನ್ಯ ಸಿದ್ದರಾಮಯ್ಯನವರ ಪಾತ್ರ ಏನೂ ಇರುವುದಿಲ್ಲ. ಆದರೂ ಸಿದ್ಧರಾಮಯ್ಯನವರ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿರುವುದು ಖಂಡನೀಯ ಎಂದರು.
ಮಡೆಪ್ಪ ತೋಳಿನವರ, ಬಸವರಾಜ ಬಸಳಿಗುಂದಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಭರಮಣ್ಷಾ ಉಪ್ಪಾರ, ರಾಜಶೇಖರ ತಳವಾರ, ಮಲ್ಲೇಶ ಚೌಗುಲೆ ಸೇರಿದಂತೆ ಇತರರು ಹಾಜರಿದ್ದರು.

error: Content is protected !!