ಕಾರವಾರ-07: ಕಾರವಾರ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಕೋಡಿಬಾಗದ ಸೇತುವೆ ಕುಸಿದಿದೆ.
43 ವರ್ಷಗಳ ಹಿಂದೆ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಮಧ್ಯರಾತ್ರಿ ಕುಸಿದು ಲಾರಿಯೊಂದು ನದಿಗೆ ಬಿದ್ದಿತ್ತು. ಪೊಲೀಸರು ಲಾರಿ ಚಾಲಕನನ್ನು ರಕ್ಷಿಸಿದ್ದಾರೆ.
ಘಟನೆ ವರದಿಯಾದ ತಕ್ಷಣ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಹೆಚ್ಚಿನ ತನಿಖೆ ನಡೆಯುತ್ತಿದೆ.