ಬೆಳಗಾವಿ-07: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನಾವಗೆಯಲ್ಲಿ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡು ಉಂಟಾಗಿರುವ ದುರ್ಘಟನೆಗೆ ಕ್ಷೇತ್ರದ ಶಾಸಕರೂ ಆಗಿರುವ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಘಾತ ವ್ಯಕ್ತಪಡಿಸಿದ್ದು, ಘಟನೆಯಲ್ಲಿ ಮಾರ್ಕಂಡೇಯ ನಗರದ ಯಲ್ಲಪ್ಪ ಗುಂಡ್ಯಾಗೋಳ ಎನ್ನುವ ಯುವಕ ಮೃತರಾಗಿರುವುದಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿರುವ ಸಚಿವರು ದೂರವಾಣಿ ಮೂಲಕ ಮೃತ ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಸೂಕ್ತ ಪರಿಹಾರ ಒದಗಿಸುವುದಾಗಿ ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಪ್ರಾರ್ಥಿಸಿದ್ದಾರೆ.
ಡಾ.ಹಿತಾ ಮೃಣಾಲ್ ಹೆಬ್ಬಾಳಕರ್ ಸ್ಥಳಕ್ಕೆ ತೆರಳಿ ಮಾಹಿತಿ ಪಡೆದರು.
ಸಂತ್ರಸ್ತರ ಜೊತೆಗೆ ನಾವಿದ್ದೇವೆ ಎನ್ನುವ ಧೈರ್ಯ ತುಂಬಿದರು.