ಬೆಳಗಾವಿ-07: ನಾವಗೆಯಲ್ಲಿ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡು ಉಂಟಾಗಿರುವ ದುರ್ಘಟನೆಯಲ್ಲಿ ಗಾಯಗೊಂಡಿರುವವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತುರ್ತು ಆರ್ಥಿಕ ಸಹಾಯ ನೀಡಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಅನುಪಸ್ಥಿತಿಯಲ್ಲಿ ಡಾ. ಹಿತಾ ಮೃಣಾಲ್ ಹೆಬ್ಬಾಳಕರ್ ರವರು ಕೆಎಲ್ಇ ಆಸ್ಪತ್ರೆಗೆ ಭೇಟಿ ನೀಡಿ, ಬೆಳಗಾವಿ ನಾವಗೆಯ ಖಾಸಗಿ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾದರವಾಡಿಯ ರಂಜಿತ್ ದ ಪಾಟೀಲ, ಹಳೇ ಬೆಳಗಾವಿಯ ಯಲ್ಲಪ್ಪ ಪ್ರ ಸಾಲ್ಗುಡೆ ಹಾಗೂ ಕವಳೆವಾಡಿಯ ಮಾರುತಿ ನಾ ಕರವೇಕರ್ ಇವರ ಆರೋಗ್ಯ ವಿಚಾರಿಸಿ, ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಆರ್ಥಿಕವಾಗಿ ಸಹಾಯ ಮಾಡಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದರು.