ಬೆಳಗಾವಿ:ಶನಿವಾರ ಹಲವು ವಿವಾದಗಳಿಂದ ಸದಾ ಸುದ್ದಿಯಲ್ಲಿರುವ ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಈ ದಾಳಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ್ ಸೇರಿದಂತೆ 260 ಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ದಾಳಿ ವೇಳೆ ಪೊಲೀಸರು ತಂಬಾಕು ಪ್ಯಾಕೆಟ್‌ಗಳು, ಸಿಗರೇಟ್‌ಗಳು, ಮೂರು ಚಾಕುಗಳು, ಸಣ್ಣ ಹೀಟರ್‌ಗಳ ಬಂಡಲ್, ವಿದ್ಯುತ್ ಒಲೆ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು,ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆದಿದೆ