ಬೆಳಗಾವಿ-೧೩: ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಆಗಷ್ಟ್.15 ರಂದು ಜಿಲ್ಲಾ ಕ್ರಿಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಧ್ವಜಾರೋಹಣ ನಿಮಿತ್ಯ ಬೆಳಗ್ಗೆ 8.55 ಗಂಟೆಗೆ ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಆಗಮಿಸಲಿದ್ದಾರೆ. ಬಳಿಕ 9 ಗಂಟೆಗೆ ಮುಖ್ಯ ಅತಿಥಿಗಳಿಂದ ಧ್ವಜಾರೋಹಣ ನೆರವೇರಿಸಿಲಿದ್ದಾರೆ.9.05 ಗಂಟೆಗೆ ಕವಾಯತ ಪರಿವೀಕ್ಷಣೆ ಶಸ್ತ್ರ ಪಡೆಗಳ ಪಥ ಸಂಚಲನ ಬಳಿಕ ಸ್ವಾತಂತ್ರೋತ್ಸವ ಕುರಿತು ಸಂದೇಶ ನೀಡಲಿದ್ದಾರೆ. ಸಂಜೆ 5 ಗಂಟೆಯಿಂದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ರಾಂತ್ರಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನದ ಆಚರಣೆ ಕಾರ್ಯಕ್ರಮ ನಡೆಯಲಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ಗೌರವಾನ್ವಿತ ಅತಿಥಿಗಳಾಗಿ ಆಗಮಿಸುವರು. ಸಂಸದರು, ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ ಶಾಸಕರು, ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.