ಬೆಳಗಾವಿ-13: ಬಾಂಗ್ಲಾದೇಶದಲ್ಲಿ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ವಿರುದ್ಧ ಎಲ್ಲರೂ ನಿಷ್ಪಕ್ಷಪಾತವಾಗಿ ಧ್ವನಿ ಎತ್ತಬೇಕು ಎಂದು ಪ್ರತಿಭಟನೆ ನಡೆಸಿದರು.
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ್ಯಾಲಿ ನಡೆಸಿದರು.
ಈ ವೇಳೆ ಪ್ರತಿಭಟನಾಕಾರರು ಬಾಂಗ್ಲಾದೇಶದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಾಂಗ್ಲಾದೇಶದಲ್ಲಿ ಹಲವು ವರ್ಷಗಳಿಂದ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದ್ದು, ಕಳೆದ ಕೆಲವು ದಿನಗಳಿಂದ ಈ ದಬ್ಬಾಳಿಕೆ ಉತ್ತುಂಗಕ್ಕೇರಿದೆ. ಬಾಂಗ್ಲಾದೇಶದ ಹಿಂದೂಗಳನ್ನು ದುರ್ಬಲಗೊಳಿಸಲು ಸಂಚು ರೂಪಿಸಲಾಗಿದೆ ಎಂದು ಆರೋಪಿಸಲಾಗಿದೆ. ವಿಎಚ್ ಪಿ ಜಿಲ್ಲಾಧ್ಯಕ್ಷ ಪ್ರಮೋದ್ ಕುಮಾರ್ ವಕುಂದಮಠ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಮಧ್ಯ ಪ್ರವೇಶಿಸಿ ಬಾಂಗ್ಲಾದೇಶದಲ್ಲಿ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯವನ್ನು ಕೊನೆಗಾಣಿಸಲು ಕ್ರಮಕೈಗೊಳ್ಳಬೇಕು’ ಎಂದರು.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಅನ್ಯಾಯ ಮತ್ತು ಶೋಷಣೆಯ ವಿರುದ್ಧ ಧ್ವನಿ ಎತ್ತಬೇಕು ಎಂದು ವಿಎಚ್‌ಪಿ-ಬಜರಂಗದಳದ ಭಾವಕಣ್ಣ ಲೋಹರ್ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ವಿಎಚ್‌ಪಿ ಮತ್ತು ಬಜರಂಗದಳದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.