ಸವದತ್ತಿ-15:78 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸವದತ್ತಿಯ ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ ವಿಧಾನ ಪರಿಷತ್ ಸದಸ್ಯರ ಚನ್ನರಾಜ ಹಟ್ಟಿಹೊಳಿ ಧ್ವಜಾರೋಹಣ ನೆರವೇರಿಸಿದರು.
ವಿಘ್ನ ವಿನಾಶಕ ಗಣಪತಿಗೆ ಪೂಜೆ ಸಲ್ಲಿಸಿ, ಪರೇಡ್ ನಲ್ಲಿ ಪಾಲ್ಗೊಂಡ ಅವರು, ಧ್ವಜಾರೋಹಣ ನೇರವೇರಿಸಿ, ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಎಲ್ಲ ಮಹನೀಯರ ತ್ಯಾಗ ಬಲಿದಾನವನ್ನು ಸ್ಮರಿಸಿದರು.
ಇದೇ ಸಮಯದಲ್ಲಿ ಕಾರ್ಖಾನೆಯ ಎಲ್ಲ ಮುಖ್ಯಸ್ಥರ, ಕಾರ್ಮಿಕರ ಶ್ರಮವನ್ನು ಶ್ಲಾಘಿಸಿ, ಗೌರವಿಸಿದರು. ಬರುವ ದಿನಗಳಲ್ಲಿ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುವುದಾಗಿ ತಿಳಿಸಿ, ಕಬ್ಬು ನುರಿಸುವ ಕ್ಷಮತೆ ಹೆಚ್ಚಿಸುವಂತೆ ಕಾರ್ಮಿಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾರ್ಖಾನೆಯ ಎಲ್ಲ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗ, ಪ್ರಗತಿಪರ ರೈತರು, ಹಿತೈಷಿಗಳು ಸೇರಿದಂತೆ ಅನೇಕರು ಹಾಜರಿದ್ದರು.