ಬೆಳಗಾವಿ-೧೫:78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ ಕೋಟೆಯಲ್ಲಿ ಸುರಿಯುತ್ತಿದ್ದ ಮಳೆಯಲ್ಲೇ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು.
ಶ್ರೀ ಸಿದ್ದೇಶ್ವರ ಸ್ವಾಮಿಯ ಹಾಗೂ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಗೌರವ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹಗಲಿರುಳು ಹೋರಾಡಿದ ಎಲ್ಲ ಮಹನೀಯರ ತ್ಯಾಗ ಬಲಿದಾನಗಳನ್ನು ಸ್ಮರಿಸಿ, ಗೌರವಿಲಾಯಿತು.
ಈ ಸಮಯದಲ್ಲಿ ಸ್ಥಳೀಯರು, ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.