ಬೆಳಗಾವಿ-೧೮:ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಜುನೆ ಬೆಳಗಾವಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ಕಲ್ಮೇಶ್ವರ ದೇವಸ್ಥಾನ ಕಟ್ಟಡದ ಕಾಲಂ ಪೂಜಾ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮನೋಹರ್ ಬಾಂಡಗಿ, ಲಕ್ಷ್ಮೀ ಲೋಕರಿ, ದೇವಸ್ಥಾನ ಕಮೀಟಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಹಾಜರಿದ್ದರು.