23/12/2024
IMG-20240802-WA0021

ಬೆಳಗಾವಿ೧೮: ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ಬೃಷ್ಟ ಮುಖ್ಯಮಂತ್ರಿಯವರ ರಾಜಿನಾಮೆ ಪಡೆಯದೆ ಸಂವಿಧಾನ ದತ್ತ ಅಧಿಕಾರದಿಂದ ನಿಯುಕ್ತಿಯಾದ ರಾಜ್ಯಪಾಲರ ಮೇಲೆ ದೋಷಮಾಡುವ ಆ ಪಕ್ಷದ ನಾಯಕರು ಸಂವಿಧಾನ ಓದಲಿ ಎಂದು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಷ ಪಾಟೀಲ ಟೀಕಿಸಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್‌) ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದ್ದಾರ ಬಗ್ಗೆ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಅವರು,
ದೂರುದಾರ ವಕೀಲ ಟಿ.ಜೆ. ಅಬ್ರಹಾಂ, ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್ ಅವರು ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರನ್ನ ಅನುಮತಿ ಕೇಳಿದ್ದರು. ಇವರ ಅನುಮತಿಯ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ ಇದಕ್ಕೆ ಪ್ರತಿಕ್ರಿಯೆ ನೀಡುವ ಭರದಲ್ಲಿ ರಾಜ್ಯಪಾಲರ ತೇಜೋವಧೆಗೆ ಪ್ರಯತ್ನಿಸಿದರೆ ಕಾಂಗ್ರೆಸ್ ನಾಯಕರ ವಿರುದ್ದ ಹೋರಾಟ ಮಾಡಬೇಕಾದಿತು ಎಂದು ಎಚ್ಚರಿಸಿದ್ದಾರೆ.
ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಜುಲೈ 26ರಂದು ಟಿ.ಜೆ.ಅಬ್ರಹಾಂ ಅವರು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ರಾಜ್ಯಪಾಲರು ಮುಖ್ಯಮಂತ್ರಿಗೆ ಶೋಕಾಸ್ ನೋಟಿಸ್ ನೀಡಿದ್ದರು. ಆಗಸ್ಟ್ 1ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗೆ ಶೋಕಾಸ್‌ ನೋಟಿಸ್‌ ನೀಡಿರುವ ಕ್ರಮಕ್ಕೆ ಉತ್ತರ ನೀಡದೆ, ನೋಟಿಸ್ ಹಿಂಪಡೆಯುವಂತೆ ಮತ್ತು ಡಿ.ಜೆ.ಅಬ್ರಾಹಂ ದೂರನ್ನು ತಿರಸ್ಕರಿಸಬೇಕು ಎಂದು ಕೋರಿ ಕಾನೂನು ಬಾಹಿರ ನಿರ್ಣಯ ಕೈಗೊಂಡಿತ್ತು. ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯವನ್ನು ರಾಜ್ಯಪಾಲರಿಗೆ ರವಾನಿಸಿ ಉಡಾಪೆ ವರ್ತನೆ ತೋರಿದ ಮಂತ್ರಿಗಳ ನಡೆ ಖಂಡನೀಯ.
ರಾಜ್ಯಪಾಲರು ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವದರಿಂದ ರಾಜ್ಯದ ಮುಖ್ಯಮಂತ್ರಿ ‌ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಪದೆ ಪದೆ ಸಂವಿಧಾನದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ಸಂವಿಧಾನದ ಮೇಲೆ ನಂಬಿಕೆ ಇದ್ದರೆ ತಮ್ಮ ಮೇಲಿನ ಆಪಾದನೆ ಬಗ್ಗೆ ನ್ಯಾಯಾಂಗದಲ್ಲಿ ಎದುರಿಸಲಿ. ನಮ್ಮ ಪಕ್ಷದ ನಾಯಕರ ಮೇಲೆ ಇಂತಹ ಆಪಾದನೆ ಬಂದಾಗ ಒಂದು ಕ್ಷಣವೂ ತಡವರಿಸದೆ ರಾಜೀನಾಮೆ ನೀಡಿ ಪ್ರಕರಣ ಎದುರಿಸಿದ್ದೆವೆ ಅದನ್ನು ಕಾಂಗ್ರೆಸ್ ನಾಯಕರು ಅರಿತುಕೊಳ್ಳಲಿ ಎಂದರು.

error: Content is protected !!