ಬೆಳಗಾವಿ-೨೧:ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರವಾಹಪೀಡಿತ ವಾಘವಾಡೆ ಗ್ರಾಮಕ್ಕೆ ಬುಧವಾರ ಭೇಟಿ ನೀಡಿದ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಮಳೆಯಿಂದ ಹಾನಿಗೊಳಗಾದ ಮನೆಗಳ ಬಗ್ಗೆ ಮಾಹಿತಿ ಪಡೆದರು.
ಮನೆ ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದ ಅವರು, ಎಲ್ಲರಿಗೂ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.